



ಕಾರ್ಕಳ , 21ನೇ ಮಾರ್ಚ್ 2022: ಕಾರ್ಕಳದ ಡಾ ಟಿ ಎಂ ಎ ಪೈ ರೋಟರಿ ಆಸ್ಪತ್ರೆಯು 24 ಸೆಪ್ಟೆಂಬರ್ 2021ರಿಂದ ಜಾರಿಗೆ ಬರುವಂತೆ ರಾಷ್ಟ್ರೀಯ ಆಸ್ಪತ್ರೆ ಮತ್ತು ಆರೋಗ್ಯ ಪೂರೈಕದಾರರ ಮಾನ್ಯತೆ ಪಡೆದ ಸಂಘ(ಎನ್ ಎ ಬಿ ಎಚ್), ಭಾರತದ ಗುಣಮಟ್ಟದ ಮಂಡಳಿಯಿಂದ (ಕ್ವಾಲಿಟಿ ಕೌನ್ಸಿಲ್ ಆಫ್ ಇಂಡಿಯಾ) ಪೂರ್ವ ಮಾನ್ಯತೆಗಾಗಿ (ಪ್ರವೇಶ ಮಟ್ಟ) ಮರು ಪ್ರಮಾಣೀಕರಿಸಲ್ಪಟ್ಟಿದೆ. ಮಾಹೆ ಮಣಿಪಾಲದ ಸಹ ಕುಲಾಧಿಪತಿಗಳಾದ ಡಾ. ಎಚ್ ಎಸ್ ಬಲ್ಲಾಳ್ ಮತ್ತು ಉಪಕುಲಪತಿಗಳಾದ ಲೆಫ್ಟಿನೆಂಟ್ ಜನರಲ್ (ಡಾ) ಎಂ ಡಿ ವೆಂಕಟೇಶ್ ರವರು ಕಾರ್ಕಳದ ಡಾ ಟಿ ಎಂ ಎ ಪೈ ರೋಟರಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಗಳಾದ ಡಾ. ಕೀರ್ತಿನಾಥ ಬಲ್ಲಾಳ, ಗುಣಮಟ್ಟ ಅನುಷ್ಠಾನದ ಸಲಹೆಗಾರರಾದ ಡಾ. ಸುನೀಲ್ ಸಿ ಮುಂಡ್ಕೂರ್ , ಸಹ ವ್ಯವಸ್ಥಾಪಕರಾದ ನಟೇಶ್ ಅವರಿಗೆ ಪ್ರಮಾಣಪತ್ರವನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮಾಹೆ ಮಣಿಪಾಲದ ಸಹ ಉಪಕುಲಪತಿದ್ವಯರುಗಳಾದ ಡಾ ಪಿ ಎಲ್ ಎನ್ ಜಿ ರಾವ್ ಮತ್ತು ಎಂ ವೆಂಕಟ್ರಾಯ ಪ್ರಭು , ಕುಲಸಚಿವರಾದ ಡಾ. ನಾರಾಯಣ ಸಭಾಹಿತ, ಕೆ ಎಂ ಸಿ ಮಣಿಪಾಲದ ಡೀನ್ ಡಾ. ಶರತ್ ಕುಮಾರ್ ರಾವ್, ಕಸ್ತೊರ್ಬಾ ಆಸ್ಪತ್ರೆಯ ಮುಖ್ಯ ನಿರ್ವಹಣಾಧಿಕಾರಿಗಳಾದ ಶ್ರೀ ಸಿ ಜಿ ಮುತ್ತಣ, ವೈದ್ಯಕೀಯ ಅಧೀಕ್ಷಕರಾದ ಡಾ. ಅವಿನಾಶ ಶೆಟ್ಟಿ, ಮತ್ತು ಸಮುದಾಯ ಅರೋಗ್ಯ ವಿಭಾಗದ ಮುಖ್ಯಸ್ಥರಾದ ಡಾ. ಅಶ್ವಿನಿ ಕುಮಾರ್ ಉಪಸ್ಥಿತರಿದ್ದರು. ಡಾ ಟಿಎಂಎ ಪೈ ರೋಟರಿ ಆಸ್ಪತ್ರೆಯು, ಈ ಮಾನ್ಯತೆ ಹೊಂದಿರುವ ಕಾರ್ಕಳದ ಏಕೈಕ ಆಸ್ಪತ್ರೆ ಮತ್ತು 2019 ರಲ್ಲಿ ಮೊದಲ ಬಾರಿಗೆ ಈ ಮಾನ್ಯತೆ ಪಡೆದಿತ್ತು. ರೋಗಿಗಳ ಆರೈಕೆ, ರೋಗಿಗಳ ಶಿಕ್ಷಣ ಮತ್ತು ಅರಿವು, ಶುಶ್ರೂಷಾ ಆರೈಕೆಯ ಗುಣಮಟ್ಟ, ಸಂವಹನ ಮತ್ತು ಮಾರ್ಗದರ್ಶನ ಮತ್ತು ಸೋಂಕು ನಿಯಂತ್ರಣ ಅಭ್ಯಾಸಗಳಂತಹ ಆಸ್ಪತ್ರೆಯ ಎಲ್ಲಾ ಕ್ಷೇತ್ರಗಳಲ್ಲಿ ಎನ್ ಎ ಬಿ ಎಚ್ ಗುಣಮಟ್ಟವನ್ನು ಕಾಯ್ದುಕೊಳ್ಳುವ ಸೌಲಭ್ಯಗಳಿಗೆ ಈ ಮಾನ್ಯತೆ ನೀಡಲಾಗುತ್ತದೆ. ಆರೋಗ್ಯ ಪ್ರಚಾರ ಅಭಿಯಾನ , ರೋಗಗಳ ತಡೆಗಟ್ಟುವಿಕೆ ಮತ್ತು ಚಿಕಿತ್ಸಾ ಶುಶ್ರೂಷಾ ಆರೈಕೆಯ ವಿಷಯದಲ್ಲಿ ರೋಗಿಗಳಿಗೆ ಸಮಗ್ರ ಆರೈಕೆಯನ್ನು ಒದಗಿಸುವ ಉದ್ದೇಶದಿಂದ ಈ ಪ್ರಮಾಣೀಕರಣ ಕಾರ್ಯಕ್ರಮವನ್ನು ಆಸ್ಪತ್ರೆಗಳು ಮತ್ತು ಆರೋಗ್ಯ ರಕ್ಷಣೆಗಾಗಿ ರಾಷ್ಟ್ರೀಯ ಮಾನ್ಯತಾ ಮಂಡಳಿ ಮತ್ತು ಕ್ವಾಲಿಟಿ ಕೌನ್ಸಿಲ್ ಆಫ್ ಇಂಡಿಯಾ ಅಭಿವೃದ್ಧಿಪಡಿಸಿದೆ ಮತ್ತು ಕಾರ್ಯಗತಗೊಳಿಸಿದೆ.. ಈ ಪ್ರಮಾಣಪತ್ರವು ಆಸ್ಪತ್ರೆಗೆ ಮತ್ತು ಸಮುದಾಯಕ್ಕೆ ಬರುವ ಎಲ್ಲಾ ರೋಗಿಗಳಿಗೆ ಸಹಾನುಭೂತಿ ಮತ್ತು ಸೌಕರ್ಯದೊಂದಿಗೆ ಸುರಕ್ಷಿತ, ಸಮರ್ಥ ಮತ್ತು ನೈತಿಕ ಅಭ್ಯಾಸವನ್ನು ಖಚಿತಪಡಿಸುತ್ತದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.