



ಉಡುಪಿ: ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾದ ಅಬ್ದುಲ್ ಅಜೀಮ್ ಮತ್ತು ಕಾರ್ಯದರ್ಶಿ ಸಲ್ಮಾ ಫಿರ್ದೋಸ್ ಅವರು ನವೆಂಬರ್ 28 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಅಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಅಲ್ಪಸಂಖ್ಯಾತರ ಕುಂದು ಕೊರತೆ ಸಭೆಯನ್ನು ನಡೆಸಲಿದ್ದು, ಸಾರ್ವಜನಿಕರು ಅಹವಾಲನ್ನು ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಯವರ ಕಛೇರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2573596, ಸಹಾಯವಾಣಿ ಸಂಖ್ಯೆ : 8277799990, ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮೌಲಾನಾ ಅಜಾದ್ ಭವನ, ಪಶು ಚಿಕಿತ್ಸಾಲಯದ ಹತ್ತಿರ, ಅಲೆವೂರು ರಸ್ತೆ, ಶಿವಳ್ಳಿ ಗ್ರಾಮ, ಮಣಿಪಾಲ ದೂ.ಸಂಖ್ಯೆ: 0820-2574596 ಅಥವಾ ಕಾರ್ಕಳ ದೂ.ಸಂಖ್ಯೆ: 08258-231101 ಹಾಗೂ ಕುಂದಾಪುರ ದೂ.ಸಂಖ್ಯೆ : 08254-230370 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.