



ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಮಾರುಕಟ್ಟೆಯಲ್ಲಿ ಕೆ.ಜಿ ಅಡಿಕೆ 505ರೂಪಾಯಿಗೆ ಮಾರಾಟವಾಗುವ ಮೂಲಕ ದಾಖಲೆ ಬರೆದಿದೆ.ಕ್ವಿಂಟಾಲ್ ಅಡಿಕೆ 50 ಸಾವಿರದ ಗಡಿದಾಟಿದ್ದು ಅಡಿಕೆ ಧಾರಾಣೆ ಇನ್ನೂ ಹೆಚ್ಚುವ ಸಾಧ್ಯತೆ ಇದೆ ಎನ್ನಲಾಗಿದೆ.
ಕಳೆದ ವರ್ಷ ಅಡಿಕೆ ಇದ್ದರೂ ಧಾರಣೆ 450 ಆಸುಪಾಸಿನಲ್ಲಿತ್ತು. ಆದರೆ ಈ ವರ್ಷ ಕೆಲವು ಹೆಬ್ರಿ ಮಲೆನಾಡಿನ ಭಾಗಗಳಲ್ಲಿ ಅಧಿಕ ಮಳೆಯಿಂದ ಕೊಳೆರೋಗ ಅಧಿಕವಾಗಿ ವ್ಯಾಪಿಸಿದೆ.ಇದರಿಂದಾಗಿ ಅಡಿಕೆ ಫಸಲು ಕಮ್ಮಿಯಾಗಬಹುದು ಕೃಷಿಕರ ಊಹೆಯಾಗಿದೆ. ಕ್ಯಾಂಪ್ಕೋ ಮಾರುಕಟ್ಟೆಯಲ್ಲಿ ಕೆ.ಜಿ. ಅಡಿಕೆಗೆ 480 ರೂಪಾಯಿ ದರವಿದೆ. ಆದ್ರೆ ಈ ದರ ಮುಂದಿನ ದಿನಗಳಲ್ಲಿ ಹೆಚ್ಚಾಗುವ ಸಾಧ್ಯತೆ ದಟ್ಟವಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.