



ಉಡುಪಿ : ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ವತಿಯಿಂದ ಜಿಲ್ಲಾ ವ್ಯಾಪ್ತಿಯಲ್ಲಿ ಅನಧಿಕೃತ ಉಪಖನಿಜ ಮತ್ತು ಮುಖ್ಯ ಖನಿಜಗಳ ಸಾಗಾಣಿಕೆಯನ್ನು ತಡೆಗಟ್ಟುವ ಸಲುವಾಗಿ ಸರ್ಕಾರವು ಒನ್ ಸ್ಟೇಟ್ ಒನ್ ಜಿ.ಪಿ.ಎಸ್ ತಂತ್ರಾಂಶವನ್ನು ಅಭಿವೃದ್ಧಿಪಡಿಸಿದ್ದು, ಅದರನ್ವಯ ಜಿಲ್ಲಾ ವ್ಯಾಪ್ತಿಯಲ್ಲಿ ಉಪಖನಿಜ ಮತ್ತು ಮುಖ್ಯ ಖನಿಜಗಳ ಸಾಗಾಣಿಕೆ ಮಾಡುವ ಎಲ್ಲಾ ವಾಹನಗಳು, ಲಾರಿ ಹಾಗೂ ಟಿಪ್ಪರ್‌ಗಳಿಗೆ ಜಿ.ಪಿ.ಎಸ್ ಅಳವಡಿಸಿಕೊಂಡು ಒನ್ ಸ್ಟೇಟ್ ಒನ್ ಜಿ.ಪಿ.ಎಸ್ ತಂತ್ರಾಂಶದಲ್ಲಿ ಕಡ್ಡಾಯವಾಗಿ ನೋಂದಾಯಿಸಿಕೊಳ್ಳಬೇಕು. ನೋಂದಣಿ ಕುರಿತು ಹೆಚ್ಚಿನ ಮಾಹಿತಿಗಾಗಿ ಕಂಟ್ರೋಲ್ ರೂಮ್ ದೂರವಾಣಿ ಸಂಖ್ಯೆ: 0820-2001103, 080-22341135 ಹಾಗೂ ಹಿರಿಯ ಭೂವಿಜ್ಞಾನಿಯವರ ಕಚೇರಿ, ಗಣಿ ಮತ್ತು ಭೂವಿಜ್ಞಾನ ಇಲಾಖೆ, ಉಡುಪಿ ದೂರವಾಣಿ ಸಂಖ್ಯೆ: 0820-2572333 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.