logo
WhatsApp Image 2026-04-02 at 14.46.04.jpeg
hindalco everlast.jpeg

ಪ್ರವಾಸೋದ್ಯಮ ಚಟುವಟಿಕೆ ನಡೆಸಲು ನೋಂದಣಿ ಕಡ್ಡಾಯ..!

ಟ್ರೆಂಡಿಂಗ್
share whatsappshare facebookshare telegram
18 Dec 2023
post image

ಉಡುಪಿ: ಜಿಲ್ಲೆಯಲ್ಲಿ ಹೋಮ್ ಸ್ಪೇ, ಹೋಟೆಲ್ ಅಥವಾ ರೆಸಾರ್ಟ್, ರೆಸ್ಟೋರೆಂಟ್, ಟ್ರಾವೆಲ್ ಏಜೆಂಟ್ಸ್/ಟೂರ್ ಅಪರೇಟರ್, ಟೂರಿಸ್ಟ್ ಟ್ರಾನ್ಸ್ಪೋರ್ಟ್ ಅಪರೇಟರ್, ಅಮ್ಯೂಸ್ ಮೆಂಟ್ ಪಾರ್ಕ್, ಕ್ಯಾರವನ್ ಟೂರಿಸಂ ಚಟುವಟಿಕೆಗಳನ್ನು ನಡೆಸುವವರು ಹಾಗೂ ಈಗಾಗಲೇ ನಡೆಸುತ್ತಿರುವವರು ಕಡ್ಡಾಯವಾಗಿ kttf.karnatakatourism.org ನಲ್ಲಿ ನೊಂದಣಿ ಮಾಡಿಸಿಕೊಳ್ಳಬೇಕು.

ಟೂರಿಸ್ಟ್ ಬೋಟಿಂಗ್, ಎಲ್ಲಾ ತರಹದ ಜಲಸಾಹಸ, ಭೂ ಸಾಹಸ, ವಾಯು ಸಾಹಸ ಕ್ರೀಡೆಗಳನ್ನು ಹಾಗೂ ಇತರೆ ಯಾವುದೇ ಪ್ರವಾಸೋದ್ಯಮ ಚಟುವಟಿಕೆಗಳನ್ನು ನಡೆಸಲು ಪ್ರವಾಸೋದ್ಯಮ ಇಲಾಖೆಯಿಂದ ಅನುಮೋದನೆ ಪಡೆಯುವುದು ಕಡ್ಡಾಯವಾಗಿರುತ್ತದೆ.

ಪ್ರಸ್ತುತ ಅನುಮೋದನೆ ಪಡೆಯದೇ ಅಥವಾ ನೊಂದಣಿ ಮಾಡಿಸದೇ ಚಟುವಟಿಕೆ ನಡೆಸುತ್ತಿರುವ ಬಗ್ಗೆ ಪ್ರವಾಸೋದ್ಯಮ ಇಲಾಖೆ ಹಾಗೂ ಜಿಲ್ಲಾಡಳಿತದ ಗಮನಕ್ಕೆ ಬಂದಿದ್ದು, ಮುಂದಿನ 20 ದಿನಗಳ ಒಳಗೆ ಯಾವುದೇ ಪ್ರವಾಸೋದ್ಯಮ ಚಟುವಟಿಕೆಯನ್ನು ನಡೆಸುವ ಮುನ್ನ ಪ್ರವಾಸೋದ್ಯಮ ಇಲಾಖೆ ಹಾಗೂ ಜಿಲ್ಲಾಡಳಿತದಿಂದ ಅನುಮತಿ ಮತ್ತು ಪರವಾನಿಗೆಯನ್ನು ಪಡೆಯದೇ ನಡೆಸಿದ್ದಲ್ಲಿ ಕೆ.ಟಿ.ಟಿ.ಎಫ್ ಆಕ್ಟ್ 2015 ರ ಪ್ರಕಾರ ದಂಡ ವಿಧಿಸಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣ, ಎ ಬ್ಲಾಕ್, ಎರಡನೇ ಮಹಡಿ, ಕೊಠಡಿ ಸಂಖ್ಯೆ:303, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 0820- 2574868 ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.