logo
WhatsApp Image 2026-04-02 at 14.46.04.jpeg
hindalco everlast.jpeg

ಬಿಜೆಪಿಯ ‘ಪ್ರಜಾ ಪ್ರಣಾಳಿಕೆ’ ಬಿಡುಗಡೆ

ಟ್ರೆಂಡಿಂಗ್
share whatsappshare facebookshare telegram
1 May 2023
post image

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುಣಾವಣೆ ಹಿನ್ನೆಲೆಯಲ್ಲಿ ಸೋಮವಾರ ಬಿಜೆಪಿ ಜನರ ಹೆಸರಿನಲ್ಲಿ ‘ಪ್ರಜಾ ಪ್ರಣಾಳಿಕೆ’ ಬಿಡುಗಡೆ ಮಾಡಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದರು. ಪಕ್ಷದ ಸಂಸದೀಯ ಮಂಡಳಿ ಸದಸ್ಯ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಚುನಾವಣಾ ಪ್ರಣಾಳಿಕೆ ಸಲಹಾ ಸಮಿತಿ ಸಂಚಾಲಕ, ಸಚಿವ ಡಾ.ಕೆ.ಸುಧಾಕರ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಮತ್ತಿತರರು ಹಾಜರಿದ್ದರು‌.

ಕಾಂಗ್ರೆಸ್‌ನಂತೆ ಬಿಜೆಪಿ ಕೂಡ ಮತದಾರರನ್ನು ಓಲೈಸಲು ಭರಪೂರ ಯೋಜನೆಗಳನ್ನು ಪ್ರಣಾಳಿಕೆಯಲ್ಲಿ ಘೋಷಿಸಿದೆ.

ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅಟಲ್ ಆಹಾರ ಕೇಂದ್ರ ಸ್ಥಾಪನೆ, ಬಿಪಿಎಲ್ ಕುಟುಂಬಗಳಿಗೆ ಉಚಿತ 3 ಗ್ಯಾಸ್( ಯುಗಾದಿ, ಗಣೇಶ ಚತುರ್ಥಿ, ದೀಪಾವಳಿಗೆ ಉಚಿತ ಗ್ಯಾಸ್), ಪೋಷಣೆ ಸ್ಕೀಮ್ (ಬಿಪಿಎಲ್ ಕುಟುಂಬಗಳಿಗೆ ಪ್ರತಿ ನಿತ್ಯ ಅರ್ಧ ಲೀಟರ್ ನಂದಿನಿ ಹಾಲು, ಏಕ ನಾಗರೀಕ ಸಂಹಿತೆ ಜಾರಿಗೆ ಭರವಸೆ, ಕರ್ನಾಟಕ ಅಪಾರ್ಟ್‌ಮೆಂಟ್ ಓನರ್‌ಶಿಪ್ ಆಕ್ಟ್ ತಿದ್ದುಪಡಿಗೆ ಭರವಸೆ, ಒನಕೆ ಓಬವ್ವ ಯೋಜನೆಯಡಿ 10 ಸಾವಿರ ರೂಪಾಯಿ, 5 ವರ್ಷದ ಭವಿಷ್ಯ ನಿಧಿ, ಸರ್ಕಾರಿ ಶಾಲೆಗಳ ಉನ್ನತೀಕರಣ ಇವೇ ಮೊದಲಾದ ಭರವಸೆಗಳನ್ನು ಬಿಜೆಪಿ ನೀಡಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.