



ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದು, ಮಂಗಳವಾರ ಕಾಂಗ್ರೆಸ್ ಪ್ರಣಾಳಿಕೆ ‘ಸರ್ವ ಜನಾಂಗದ ಶಾಂತಿಯ ತೋಟ, ಇದುವೇ ಕಾಂಗ್ರೆಸ್ ಬದ್ಧತೆ’ಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುಗಡೆ ಮಾಡಿದರು.
ಪ್ರಣಾಳಿಕೆ ಹೊತ್ತಗೆಗೆ ಅರಿಶಿನ ಕುಂಕುಮ ಹಚ್ಚಿ, ವೀಳ್ಯದೆಲೆ ಅಡಕೆ ಇಟ್ಟು ಸಾಂಪ್ರದಾಯಿಕವಾಗಿ ಪ್ರಣಾಳಿಕೆ ಬಿಡುಗಡೆ ಮಾಡಲಾಯಿತು.
ಪ್ರಣಾಳಿಕೆ ಬಿಡುಗಡೆ ಮಾಡಿ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನಾವು ಈಗಾಗಲೇ ಗೃಹಜ್ಯೋತಿ, ಗೃಹಲಕ್ಷಿ, ಅನ್ನಭಾಗ್ಯ, ಯುವನಿಧಿ ಮತ್ತು ಎಲ್ಲ ಮಹಿಳೆಯರಿಗೆ ಸರ್ಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣ ( ಶಕ್ತಿ ) ಭರವಸೆಗಳನ್ನು ಘೋಷಿಸಿದ್ದೇವೆ. ಇದಕ್ಕೆ ನಾನು ಗ್ಯಾರಂಟಿ ಕೊಡುತ್ತೇನೆ. ಮೊದಲ ಸಂಪುಟ ಸಭೆಯಲ್ಲೇ ಇವುಗಳನ್ನು ಘೋಷಿಸುತ್ತೇವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಕೇಂದ್ರದ ಮಾಜಿ ಸಚಿವ ಪಿ ಚಿದಂಬರಂ, ಪ್ರಣಾಳಿಕೆ ಸಮಿತಿ ಅಧ್ಯಕ್ಷ ಜಿ. ಪರಮೇಶ್ವರ, ಮಾಜಿ ಸಚಿವೆ ರಾಣಿ ಸತೀಶ್, ಎಐಸಿಸಿ ಸಂವಹನ ವಿಭಾಗದ ಮುಖ್ಯಸ್ಥ ಪವನ್ ಖೇರಾ ಇದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.