



ಕಾರ್ಕಳ ವಿಧಾನಸಭಾ ಕ್ಷೇತ್ರದ ರೆಂಜಾಳ ಗ್ರಾಮದ ಸುಮಾರು 17 ಜನ ಬಿಜೆಪಿ ಕಾರ್ಯಕರ್ತರು ರೆಂಜಾಳ ರಮೇಶ್ ಶೆಟ್ಟಿ ,ಪ್ರವೀಣ್ ಶೆಟ್ಟಿ, ಜೀವನ್ ಶೆಟ್ಟಿ ಹಾಗೂ ಸಾಧಿಕ್ ರೆಂಜಾಳ ಇವರುಗಳ ಮುಂದಾಳತ್ವದಲ್ಲಿ ಇಂದು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಗೊಂಡರು ಕಾಂಗ್ರೆಸ್ ಅಭ್ಯರ್ಥಿ ಉದಯ ಶೆಟ್ಟಿ ಮುನಿಯಲ್ ಚುನಾವಣಾ ಕಾರ್ಯಾಲಯದಲ್ಲಿ ಪಕ್ಷದ ಮುಖಂಡರುಗಳಾದ ಪುರಸಭೆಯ ವಿಪಕ್ಷ ನಾಯಕ ಅಸ್ಪಾಕ್, ಸುಬೀತ್ N.R,ಪ್ರಚಾರ ಸಮಿತಿಯ ಅಧ್ಯಕ್ಷ ಸುಭೋದ್ ರಾವ್ ವಲೇರಿಯನ್ ಪಾಯಸ್, ಜಿಲ್ಲಾ ಕಾಂಗ್ರೆಸ್ ಯುವ ಕಾಂಗ್ರೆಸ್ ಅಧ್ಯಕ್ಷ ದೀಪಕ್ ಕೋಟ್ಯಾನ್, ನಗರ ಕಾಂಗ್ರೆಸ್ ಅಧ್ಯಕ್ಷರಾದ ಮಧುರಾಜ್ ಶೆಟ್ಟಿ, ಪುರಸಭೆ ಸದಸ್ಯರಾದ ಪ್ರತಿಮಾ ರಾಣೆ, ನಳಿನಿ ಆಚಾರ್ಯ,ನಗರ ಮಹಿಳಾ ಅಧ್ಯಕ್ಷೆ ಕಾಂತಿ ಶೆಟ್ಟಿ ಈ ಸಂದರ್ಭದಲ್ಲಿ ಹಾಜರಿದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.