



ಕಾರ್ಕಳ :ಕಾರ್ಕಳದ ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯು ತನ್ನ ಹೆಸರಾಂತ ಆರೋಗ್ಯ ತಜ್ಞರ ಸಮಿತಿಗೆ ಹೊಸ ತಜ್ಞರ ಸೇರ್ಪಡೆಯನ್ನು ಪ್ರಕಟಿಸಿದೆ. ನ.9 ರಿಂದ ಜಾರಿಗೆ ಬರುವಂತೆ ತಿಂಗಳ ಪ್ರತೀ ಗುರುವಾರ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಮೂಳೆ ಮತ್ತು ಕೀಲು ವಿಭಾಗದ ಪ್ರಾಧ್ಯಾಪಕ ಡಾ. ಶರತ್ ಕುಮಾರ್ ರಾವ್ ಅವರು ಕಾರ್ಕಳದ ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯಲ್ಲಿ ಸಮಾಲೋಚನೆಗಾಗಿ ಲಭ್ಯವಿರುತ್ತಾರೆ. ಅವರು ಮೂಳೆ ಮತ್ತು ಕೀಲು ಬದಲೀ ಜೋಡಣೆ ಮತ್ತಿತರ ಮೂಳೆ ಸಂಬಂಧಿತ ಶಸ್ತ್ರ ಚಿಕಿತ್ಸೆ ಕ್ಷೇತ್ರದಲ್ಲಿ ಪ್ರಸಿದ್ದಿಯಾಗಿದ್ದಾರೆ.
ಡಾ ಶರತ್ ಕುಮಾರ್ ರಾವ್ ಆವರ ಸೇರ್ಪಡೆಯಿಂದ ಇಲ್ಲಿನ ಸ್ಥಳೀಯ ರೋಗಿಗಳಿಗೆ ಸಕಾಲದಲ್ಲಿ ರೋಗ ನಿರ್ಣಯಮಾಡಿ ನಮ್ಮ ಗುಣಮಟ್ಟದ ವೈದ್ಯಕೀಯ ಆರೈಕೆ ನೀಡಲು ಇನ್ನಷ್ಟು ಸಹಕಾರಿಯಾಗಲಿದೆ. ಇವರು ಪ್ರತಿ ಗುರುವಾರ ಸಂಜೆ ಗಂಟೆ 5:00 ರಿಂದ 6:30 ರವರೆಗೆ ಸಮಾಲೋಚನೆಗಳಿಗೆ ಲಭ್ಯವಿರುತ್ತಾರೆ. ಅವರನ್ನು ಸ್ವಾಗತಿಸಲು ನಾವು ಸಂತೋಷಪಡುತ್ತೇವೆ ಎಂದು ಡಾ.ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆ ಕಾರ್ಕಳದ ಮುಖ್ಯ ವೈದ್ಯಾಧಿಕಾರಿ ಡಾ ಕೀರ್ತಿನಾಥ ಬಲ್ಲಾಳ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ, ದೂರವಾಣಿ ಸಂಖ್ಯೆ 9731601150 ಅಥವಾ 08258 230583 ಅನ್ನು ಸಂಪರ್ಕಿಸಬಹುದು. ಕಾರ್ಕಳ ಡಾ.ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಮುಖ್ಯ ವೈದ್ಯಾಧಿಕಾರಿ ಡಾ ಕೀರ್ತಿನಾಥ ಬಲ್ಲಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.