



ಉಡುಪಿ: ಪ್ರಸಿದ್ಧ ಸಾರಿಗೆ ಉದ್ಯಮಿ, ಸಾಮಾಜಿಕ ಕಾರ್ಯಕರ್ತ ಪಾಂಗಾಳ ರಬೀಂದ್ರ ನಾಯಕ್ (99) ಅವರು ಸುದೀರ್ಘ ಕಾಲದ ಅನಾರೋಗ್ಯದಿಂದ ಇಂದು ಮುಂಜಾನೆ ನಿಧನ ಹೊಂದಿದರು.
ರಬೀಂದ್ರ ನಾಯಕ್ 1922ರ ಫೆಬ್ರವರಿ 9ರಂದು ಉಡುಪಿಯಲ್ಲಿ ಜನಿಸಿದರು. ಬಾಂಬೆ ವಿಶ್ವವಿದ್ಯಾನಿಲಯದಲ್ಲಿ ಭೌತಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಬಳಿಕ 1945-50ರ ಅವಧಿಯಲ್ಲಿ ಹೊಸದಿಲ್ಲಿಯ ಕೌನ್ಸಿಲ್ ಫಾರ್ ಸೈಂಟಿಫಿಕ್ ಆ್ಯಂಡ್ ಇಂಡಸ್ಟ್ರಿಯಲ್ ರಿಸರ್ಚ್, ನ್ಯಾಷನಲ್ ಫಿಸಿಕಲ್ ಲ್ಯಾಬೊರೇಟರಿಯಲ್ಲಿ ಟೆಕ್ನಾಲಜಿಸ್ಟ್ ಆಗಿ ಕೆಲಸ ಮಾಡಿದ್ದರು. ರಾಯಲ್ ಇಂಡಿಯನ್ ನೇವಿಯಲ್ಲಿ ತಾಂತ್ರಿಕ ಸಹಾಯಕರಾಗಿಯೂ ಕೆಲಸ ಮಾಡಿದ್ದರು.
1951ರಲ್ಲಿ ಹನುಮಾನ್ ಟ್ರಾನ್ಸ್‌ಪೋರ್ಟ್ ಕಂಪನಿಗೆ ಸೇರಿದ ಅವರು, 1972ರಲ್ಲಿ ವ್ಯವಸ್ಥಾಪಕ ನಿರ್ದೇಶಕರಾದರು. ದಶಕಗಳ ಹನುಮಾನ್ ಟ್ರಾನ್ಸ್‌ಪೋರ್ಟ್ ಕಂಪೆನಿಯಲ್ಲಿ ಸೇವೆ ಸಲ್ಲಿಸಿ, ಸಾರಿಗೆ ಕ್ಷೇತ್ರದಲ್ಲಿ ಯಶಸ್ವಿ ಸಂಸ್ಥೆಯನ್ನಾಗಿ ರೂಪಿಸಿದರು. ಕೆಲಕಾಲ ಅವರು ಶ್ರೀಗಜಾನನ ಮೋಟಾರ್ ಟ್ರಾನ್ಸ್‌ಪೋರ್ಟ್ ಕಂ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದರು. ಪಟ್ಲ ಶಾಲೆ ಅಧ್ಯಕ್ಷರಾಗಿ, ಕಟಪಾಡಿಯ ಎಸ್‍ವಿಎಸ್ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.