


ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ಗೆ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ದರ್ಶನ್ರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಶ್ವಜೀತ್ ಶೆಟ್ಟಿ ದರ್ಶನ್, ಪವಿತ್ರಾ ಗೌಡ, ಲಕ್ಷ್ಮಣ್ ಗೌಡ, ಪ್ರದೋಶ್ ಅವರಿಗೆ ಜಾಮೀನು ಮಂಜೂರು ಮಾಡಿದ್ದಾರೆ.
ಜಾಮೀನಿನಿಂದ ದರ್ಶನ್ಗೆ ನಿರಾಳತೆ ದೊರೆತಿದ್ದು, ಅವರ ಮೇಲೆ ಈಗ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಬೇಕಾದ ಒತ್ತಡವೂ ತೊಲಗಿದೆ. ಮಾತ್ರವಲ್ಲದೆ ನಿಂತಿರುವ ಸಿನಿಮಾಗಳ ಚಿತ್ರೀಕರಣಕ್ಕೂ ಅವರು ತೆರಳಬಹುದಾಗಿದೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ಗೆ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ದರ್ಶನ್ರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಶ್ವಜೀತ್ ಶೆಟ್ಟಿ ದರ್ಶನ್, ಪವಿತ್ರಾ ಗೌಡ, ಪ್ರದೋಶ್, ಅನುಕುಮಾರ್, ನಾಗರಾಜು, ಲಕ್ಷ್ಮಣ್, ಜಗದೀಶ್ ಅವರಿಗೆ ಜಾಮೀನು ಮಂಜೂರು ಮಾಡಿದ್ದಾರೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜುಲೈ 11 ರಂದು ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದರು. ಪ್ರಸ್ತುತ ಅವರು ಅನಾರೋಗ್ಯದ ಕಾರಣ ನೀಡಿ ಹೈಕೋರ್ಟ್ನಿಂದ ಮಧ್ಯಂತರ ಜಾಮೀನು ಪಡೆದಿದ್ದಾರೆ. ಈಗ ಅವರಿಗೆ ಜಾಮೀನು ಮಂಜೂರಾಗಿದ್ದು, ತಾತ್ಕಾಲಿಕ ನಿರಾಳತೆ ದೊರಕಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.