



ನವದೆಹಲಿ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ 2019ರಲ್ಲಿ ಸಂವಿಧಾನದ 370 ನೇ ವಿಧಿಯ ಅಡಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿತ್ತು. ಇದನ್ನು ಸುಪ್ರೀಂ ಕೋರ್ಟಿನಲ್ಲಿ ಪ್ರಶ್ನಿಸಲಾಗಿದ್ದು, ಈ ಸಂಬಂಧ ಸುಪ್ರೀಂ ಕೋರ್ಟ್ ಡಿಸೆಂಬರ್ 11 ರಂದು ತನ್ನ ತೀರ್ಪನ್ನು ಪ್ರಕಟಿಸಲಿದೆ.
ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಸಂಜೀವ್ ಖನ್ನಾ, ಬಿ.ಆರ್.ಗವಾಯಿ ಮತ್ತು ಸೂರ್ಯಕಾಂತ್ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್‌ನ ಪೀಠವು ಹದಿನಾರು ದಿನಗಳ ಸುದೀರ್ಘ ವಿಚಾರಣೆಯನ್ನು ಮಾಡಿತ್ತು. ಆಗಸ್ಟ್ 2, 2023 ರಂದು ಈ ವಿಷಯದ ವಿಚಾರಣೆ ಪ್ರಾರಂಭವಾಗಿತ್ತು. 2023 ರ ಸೆಪ್ಟೆಂಬರ್ 5 ರಂದು ಈ ವಿಷಯದ ತೀರ್ಪನ್ನು ಕಾಯ್ದಿರಿಸಿತ್ತು. ರಾಜ್ಯವನ್ನು ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿದ ಜೆ & ಕೆ ಮರುಸಂಘಟನೆ ಕಾಯ್ದೆಯನ್ನು ಅರ್ಜಿದಾರರು ಪ್ರಶ್ನಿಸಿದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.