



ನವದೆಹಲಿ: ಗಣರಾಜ್ಯೋತ್ಸವ ಪರೇಡ್‌ನಲ್ಲಿ ಭಾಗವಹಿಸಿದ್ದ ರಾಜ್ಯದ ಸ್ತಬ್ಧಚಿತ್ರಕ್ಕೆ ಅತ್ಯುತ್ತಮ ಸ್ತಬ್ಧಚಿತ್ರ ವಿಭಾಗದಲ್ಲಿ ದ್ವಿತೀಯ ಸ್ಥಾನ ದೊರೆತಿದೆ.
ಕೇಂದ್ರ ಸರ್ಕಾರದ ರಕ್ಷಣಾ ಇಲಾಖೆಯ ತಜ್ಞರ ಸಮಿತಿ ಶುಕ್ರವಾರ ಪ್ರಶಸ್ತಿ ಘೋಷಿಸಿದ್ದು, ಕರಕುಶಲ ಕಲೆಯ ವೈಭವವನ್ನು ಬಿಂಬಿಸಿದ್ದ ರಾಜ್ಯದ ಸ್ತಬ್ಧಚಿತ್ರಕ್ಕೆ 2ನೇ ಸ್ಥಾನ ಲಭ್ಯವಾಗಿದೆ.
ಉತ್ತರ ಪ್ರದೇಶದ ಕಾಶಿ ವಿಶ್ವನಾಥ ಕಾರಿಡಾರ್ ಕುರಿತ ಸ್ತಬ್ಧಚಿತ್ರ ಪ್ರಥಮ ಸ್ಥಾನ ಪಡೆದಿದೆ ಮೇಘಾಲಯದ ಮಹಿಳೆಯರ ಸಹಕಾರ ಸಂಘ ಹಾಗೂ ರಾಜ್ಯದ ಸುವರ್ಣ ಮಹೋತ್ಸವ ಸಂಭ್ರಮ ಬಿಂಬಿಸುವ ಸ್ತಬ್ಧಚಿತ್ರ ತೃತೀಯ ಸ್ಥಾನ ದೊರೆತಿದೆ. ‘ವಂದೇ ಭಾರತಮ್’ ನೃತ್ಯ ತಂಡವು ವಿಶೇಷ ಬಹುಮಾನ ಪಡೆದಿದ್ದು, ಹುಬ್ಬಳ್ಳಿಯ ಮಯೂರ ಭರತ ನೃತ್ಯ ಅಕಾಡೆಮಿಯ ನೃತ್ಯಪಟುಗಳು ಈ ತಂಡದಲ್ಲಿ ಭಾಗವಹಿಸಿದ್ದು ತಂಡ ಗಮನ ಸೆಳೆದಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.