



ಕಾರ್ಕಳ: ಆಜೆಕಾರು ಗುಡ್ಡೆಅಂಗಡಿ ಸರಕಾರಿ ಶಾಲೆಯಲ್ಲಿ ನಡೆದ ಶಾಲಾ ಪ್ರಾರಂಭೋತ್ಸವಕ್ಕೆ ನಮ್ಮ ತುಳುನಾಡು ಟ್ರಸ್ಟಿನ ರಾಜ್ಯ ಸಂಚಾಲಕ ತುಳುನಾಡ ತುಡರ್ ಕೀರ್ತಿ ಕಾರ್ಕಳ ಅಗಮಿಸಿದರು. ಸರಕಾರಿ ಶಾಲೆಯ ಸವಲತ್ತುಗಳ ಬಗ್ಗೆ ವಿಚಾರಿಸಿ ತಮ್ಮ ಮಕ್ಕಳನ್ನು ಸರಕಾರಿ ಶಾಲೆಗೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಸೇರಿಸಿ ಹಾಗೂ ಸರಕಾರಿ ಸವಲತ್ತುಗಳನ್ನು ಸದುಪಯೋಗಿಸಿ ಎಂದು ಪೋಷಕರಿಗೆ ವಿನಂತಿಸಿದರು.
ಶಾಲಾ ಮಕ್ಕಳ ಮುಂದಿನ ಜೀವನಕ್ಕೆ ಶುಭ ಹಾರೈಸಿದರು. ಇದೇ ಸಂದರ್ಭದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷ ಬಸವರಾಜ್, ಶಾಲಾ ಮುಖ್ಯೋಪಾಧ್ಯಾಯನಿ ಜಯಂತಿ ಎಸ್ ಡಿ ಎಂ ಸಿ ಸದಸ್ಯರಾದಂತಹ ಅನುಷಾ ಶೆಟ್ಟಿ ಹಾಗೂ ಸುದಿನ ನ್ಯೂಸ್ ನ ಅರುಣ್ ಕುಮಾರ್ ಉಪಸ್ಥಿತರಿದ್ದರು. ಶಾಲಾ ಶಿಕ್ಷಕ ಶ್ರೀವಸ್ತ ಸ್ವಾಗತಿಸಿ. ಗೌರವ ಶಿಕ್ಷಕಿ ರಕ್ಷಿತಾ ವಂದಿಸಿದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.