



ವಿಜಯಪುರ: ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಮಗು ಸಾತ್ವಿಕ್ ನನ್ನು ಕೊನೆಗೂ ರಕ್ಷಣೆ ಮಾಡಲಾಗಿದೆ.
ಸತತ 20 ಗಂಟೆಗಳಿಗೂ ಹೆಚ್ಚು ಕಾಲ ನಡೆದ ಕಾರ್ಯಾಚರಣೆಯ ಬಳಿಕ ಮಗುವನ್ನು ರಕ್ಷಣೆ ಮಾಡಲಾಗಿದೆ.
ಮಗುವಿನ ಪೋಷಕರಾದ ಸತೀಶ್ ಮತ್ತು ಪೂಜಾ ದಂಪತಿ ಹಾಗೂ ಸ್ಥಳೀಯರು ಕೊನೆಗೂ ನಿಟ್ಟುಸಿರು ಬಿಡುವಂತಾಗಿದೆ.
ಸಾತ್ವಿಕ್ ನನ್ನು ಜೀವಂತವಾಗಿ ಹೊರ ತೆಗೆಯುವಲ್ಲಿ ರಕ್ಷಣಾ ಸಿಬ್ಬಂದಿ ಕೊನೆಗೂ ಯಶಸ್ವಿಯಾಗಿದ್ದಾರೆ. ನಿರಂತರ ಕಾರ್ಯಾಚರಣೆ ನಡೆಸಿ ಮಗು ಸಾತ್ವಿಕ್ ನನ್ನು ರಕ್ಷಿಸಿದ ಸಿಬ್ಬಂದಿಯ ಬಗ್ಗೆ ಇದೀಗ ಎಲ್ಲೆಡೆ ಮೆಚ್ಚುಗೆಯ ಮಹಾಪೂರವೇ ವ್ಯಕ್ತವಾಗುತ್ತಿದೆ. ಸಾತ್ವಿಕ್ ನನ್ನು ತಕ್ಷಣವೇ ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.