



ಉಡುಪಿ: ಉಡುಪಿ: ನಮಗೆ ದೈವಾರಾಧನೆ ಮೇಲೆ ನಂಬಿಕೆ ಇದೆ. ಕಾಂತಾರ ಸಿನೆಮಾದಿಂದ ದೇಶದಾದ್ಯಂತ ತುಳು ಸಂಸ್ಕೃತಿ ಮೇಲಿನ ಗೌರವ ಹೆಚ್ಚಾಗಿದೆ. ದೈವ ಎಂಬುದು ನಮ್ಮ ನಂಬಿಕೆ ದೈವದ ಮೂಲಕ ನಮ್ಮ ದಿನಚರಿ ಆರಂಭವಾಗುತ್ತದೆ. ನಂಬಿಕೆ ಸಂಸ್ಕೃತಿ ಇಲ್ಲದವರು ವ್ಯತರಿಕ್ತವಾಗಿ ಮಾತನಾಡುತ್ತಾರೆ ಎಂದು ಕನ್ನಡ ಮತ್ತು ಸಂಸ್ಕೃತಿಇಲಾಖೆ ಸಚಿವ ಸುನಿಲ್ ಕುಮಾರ್ ಹೇಳಿದರು. ಉಡುಪಿಯಲ್ಲಿಂದು ನಟ ಚೇತನ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕಾಂತಾರ ಸಿನಿಮಾ ತುಳುನಾಡ ಸಂಸ್ಕೃತಿಗೆ ಸಿಕ್ಕ ಗೌರವ. ನಮ್ಮ ಜಿಲ್ಲೆಯ ಜನ ನಂಬಿಕೆ ಮತ್ತು ಶ್ರದ್ಧೆಯಿಂದ ಬದುಕುವರು. ನಂಬಿಕೆಯಿಂದ ದೂರ ಇರುವವರು ಅದನ್ನು ಆಕ್ಷೇಪಿಸುತ್ತಾರೆ ಎಂದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.