logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಜನಸಾಮಾನ್ಯರ ಕೆಲಸಗಳಿಗೆ ಸ್ಪಂದಿಸುವುದು ಸರ್ಕಾರದ ಹಾಗೂ ಅಧಿಕಾರಿಗಳ ಆದ್ಯ ಕರ್ತವ್ಯ: ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಆರ್ ಹೆಬ್ಬಾಳ್ಕರ್

ಟ್ರೆಂಡಿಂಗ್
share whatsappshare facebookshare telegram
26 Sept 2023
post image

ಉಡುಪಿ : ಜನಸಾಮಾನ್ಯರ ಕೆಲಸ ಕಾರ್ಯಗಳಿಗೆ ಸ್ಪಂದಿಸಿ, ಅವರುಗಳ ಆಶೋತ್ತರಗಳನ್ನು ಈಡೇರಿಸುವುದು ಸರ್ಕಾರ ಹಾಗೂ ಅಧಿಕಾರಿಗಳ ಆದ್ಯ ಕರ್ತವ್ಯವಾಗಿದೆ. ಇದಕ್ಕನುಗುಣವಾಗಿ ಎಲ್ಲರೂ ಕಾರ್ಯನಿರ್ವಹಿಸಬೇಕು ಎಂದು ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಆರ್. ಹೆಬ್ಬಾಳ್ಕರ್ ತಿಳಿಸಿದರು.

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಉಡುಪಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತಿ ವತಿಯಿಂದ ನಡೆದ ಜನತಾ ದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಜನರು ನಮ್ಮನ್ನು ನಂಬಿ ಸರ್ಕಾರ ನಡೆಸಲು ಅವಕಾಶ ನೀಡಿದ್ದಾರೆ. ಚುನಾವಣಾ ಪೂರ್ವದಲ್ಲಿ ಅವರಿಗೆ ನೀಡಿರುವ ಭರವಸೆಗಳನ್ನು ಹಂತ ಹಂತವಾಗಿ ನೂರು ದಿನಗಳಲ್ಲಿ ಈಡೇರಿಸುವ ಕಾರ್ಯವನ್ನು ಮಾಡುತ್ತಾ ಬಂದಿದ್ದೇವೆ. ಅದರ ಜೊತೆಯಲ್ಲಿ ಜನರ ಕುಂದು ಕೊರತೆಗಳನ್ನು ಆಲಿಸಿ, ಪರಿಹರಿಸಲು ಜನತಾ ದರ್ಶನ ಕಾರ್ಯಕ್ರಮವನ್ನು ಇಡೀ ರಾಜ್ಯದಲ್ಲಿ ಏಕಕಾಲದಲ್ಲಿ ನಡೆಸಲಾಗುತ್ತಿದೆ. ಇದರ ಭಾಗವಾಗಿ ಇಂದು ಜಿಲ್ಲಾ ಮಟ್ಟದಲ್ಲಿ ಆಯೋಜಿಸಿದ್ದೇವೆ. ಜನರ ಸಮಸ್ಯೆಗಳನ್ನು ಆಲಿಸಿ, ಅವುಗಳಿಗೆ ಸ್ಪಂದಿಸಲು ಮುಂದಾಗಲಾಗುವುದು ಎಂದರು.

ಸರ್ಕಾರ ಹಾಗೂ ಅಧಿಕಾರಿಗಳಿರುವುದು ಜನರ ಸಮಸ್ಯೆಗಳನ್ನು ಪರಿಹರಿಸಲು. ಇವುಗಳನ್ನು ಅರಿತು ನಾವುಗಳು ಕೆಲಸ ಮಾಡಬೇಕಿದೆ. ಜಿಲ್ಲೆಯ ಉಸ್ತುವಾರಿ ಸಚಿವೆ ಯಾಗಿರುವವರೆಗೂ ಇಲ್ಲಿನ ಜನರ ಸಮಸ್ಯೆಯನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಸಚಿವರು ತಿಳಿಸಿದರು.

ಮಾನ್ಯ ಮುಖ್ಯಮಂತ್ರಿಗಳು ಜನ ಸಾಮಾನ್ಯರ ಸಮಸ್ಯೆಗಳನ್ನು ಸ್ಥಳೀಯವಾಗಿ ಆಲಿಸಿ, ಅವುಗಳನ್ನು ಸ್ಥಳೀಯ ಮಟ್ಟದಲ್ಲಿ ಪರಿಹರಿಸಬೇಕೆಂಬ ಉದ್ದೇಶದಿಂದ ಮಹತ್ವಾಕಾಂಕ್ಷಿ ಜನಸ್ಪಂದನ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ.

ಅಧಿಕಾರಿಗಳು ಚುರುಕಾಗಿ ಕಾರ್ಯನಿರ್ವಹಿಸುವುದರೊಂದಿಗೆ ಇದಕ್ಕೆ ಸ್ಪಂದಿಸಬೇಕು ಎಂದರು.

ಸಾಮಾನ್ಯವಾಗಿ ಪೊಲೀಸ್, ಅರಣ್ಯ, ಆರೋಗ್ಯ, ಕಂದಾಯ ಸೇರಿದಂತೆ ಮತ್ತಿತರ ಇಲಾಖೆಗಳಲ್ಲಿ ದಿನನಿತ್ಯ ಜನರು ಕೆಲಸಗಳನ್ನು ಅರಸಿ, ಬರುತ್ತಾರೆ. ಈ ರೀತಿ ತಮ್ಮ ಕೆಲಸಗಳಿಗಾಗಿ ಕಚೇರಿಗೆ ಬಂದಾಗ ಅವರನ್ನು ಅಲೆಯುವಂತೆ ಮಾಡುವುದು ಸರಿಯಲ್ಲ. ಅಧಿಕಾರಿಗಳು ತಮ್ಮ ಅಹಂ ಅನ್ನು ಬಿಟ್ಟು ಜನಸಾಮಾನ್ಯರ ಕಷ್ಟಗಳಿಗೆ ಹೃದಯವಂತರಾಗಿ ಸ್ಪಂದಿಸಬೇಕು ಎಂದರು.

ಇಂದಿನ ಜನಸ್ಪಂದನ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳಲ್ಲಿ ಕೆಲಸಗಳನ್ನು ಅರಸಿ, 143 ಅರ್ಜಿಗಳು ಬಂದಿದ್ದು, ಇವುಗಳನ್ನು ಕಾನೂನಿನ ಚೌಕಟ್ಟಿನ ಅಡಿಯಲ್ಲಿ ಬಗೆಹರಿಸಲಾಗುವುದು. ಕೆಲವು ಅರ್ಜಿಗಳು ಸ್ಥಳದಲ್ಲಿಯೇ ಬಗೆಹರಿಸಲು ಸಾಧ್ಯವಾಗದಿದ್ದಲ್ಲಿ ಕಾಲಮಿತಿಯೊಳಗೆ ಸ್ಪಂದಿಸಲು ಸೂಚಿಸಲಾಗುವುದು ಎಂದ ಅವರು, ಮುಂದಿನ ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ ಈ ದಿನ ಬಂದಿರುವ ಎಲ್ಲಾ ಅರ್ಜಿಗಳ ವಿಲೇವಾರಿ ಆಗಿರುವ ಬಗ್ಗೆ ಕೂಲಂಕುಷವಾಗಿ ಮೊದಲ ಒಂದು ಗಂಟೆಯಲ್ಲಿ ಪರಿಶೀಲಿಸಿ, ಅರ್ಜಿದಾರರಿಂದ ತಮ್ಮ ಸಮಸ್ಯೆಗಳಿಗೆ ಸ್ಪಂದಿಸಿರುವ ಬಗ್ಗೆ ಮಾಹಿತಿ ಪಡೆಯಲಾಗುವುದು ಎಂದರು.

ಸಾರ್ವಜನಿಕರಿಂದ ವಿವಿಧ ಅಹವಾಲು ಅರ್ಜಿ ಸ್ವೀಕರಿಸಲು ಕೌಂಟರ್‌ಗಳನ್ನು ತೆರೆಯಲಾಗಿತ್ತು. ಕಾರ್ಯಕ್ರಮದಲ್ಲಿ ಡಿಸಿ ಮನ್ನಾ ಜಾಗದ ಹಕ್ಕುಪತ್ರಗಳನ್ನು ವಿವಿಧ ಫಲಾನುಭವಿಗಳಿಗೆ ವಿತರಿಸಲಾಯಿತು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದಸಾರ್ವಜನಿಕರಿಗೆ ಯೋಜನೆಗಳ ಬಗ್ಗೆ ಮಾಹಿತಿ ನೀಡಲು ವಸ್ತು ಪ್ರದರ್ಶನದ ಮಳಿಗೆಯನ್ನು ತೆರೆಯಲಾಗಿತ್ತು.

ಜನತಾ ದರ್ಶನಕ್ಕೆ ಜಿಲ್ಲೆಯ ವಿವಿಧ ಭಾಗಗಳಿಂದ ಅಹವಾಲು ಹೊತ್ತು ತಂದ ಸಾವಿರಾರು ಸಾರ್ವಜನಿಕರು, ಸಂಘ- ಸಂಸ್ಥೆಗಳು, ಸ್ವಯಂ-ಸೇವಕರು, ಮಹಿಳಾ ಮಂಡಳಗಳು ತಮ್ಮ ಸಮಸ್ಯೆಗಳ ಬಗೆಹರಿಸಲು ಅಹವಾಲುಗಳನ್ನು ಸಲ್ಲಿಸಿ, ಕೆಲವೊಂದು ತಕ್ಷಣದಲ್ಲಿಯೇ ಸ್ಥಳೀಯವಾಗಿ ಬಗೆಹರಿಸಲಾಯಿತು. ಕೆಲವುಗಳನ್ನು ಕಾಲಮಿತಿಯೊಳಗೆ ಬಗೆಹರಿಸಲು ಸೂಚಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ, ಜಿಲ್ಲಾ ಪಂಚಾಯತಿ ಸಿಇಒ ಡಾ.ಪ್ರಸನ್ನ ಎಚ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್, ಕುಂದಾಪುರ ಉಪವಿಭಾಗಧಿಕಾರಿ ರಶ್ಮಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.