



ಉಡುಪಿ, : ಜಿಲ್ಲಾ ಕಾರಾಗೃಹದಲ್ಲಿನ ಬಂದಿಗಳಿಗೆ ಮಾರ್ಚ್ 21 ರಿಂದ ಕೋವಿಡ್ ಮಾರ್ಗಸೂಚಿಯನ್ವಯ ನೇರ ಸಂದರ್ಶನವನ್ನು ಪುನರಾರಂಭಿಸಲಾಗುತ್ತಿದ್ದು, ನಿಗಧಿತ ಸಂದರ್ಶನಕ್ಕೆ ಮಾತ್ರ ಅವಕಾಶ ನೀಡಲಾಗುವುದು. ಬಂದಿಗಳ ಸಂದರ್ಶನಕ್ಕೆ ಬರುವ ಕುಟುಂಬ ಸದಸ್ಯರು, ಸಂಬAಧಿಕರು, ಸ್ನೇಹಿತರು ಮತ್ತು ವಕೀಲರು ಮುಂಚಿತವಾಗಿ ಕಾರಾಗೃಹದ ಅಧೀಕ್ಷಕರ ಕಚೇರಿಯ ದೂರವಾಣಿ ಸಂಖ್ಯೆ: 0820-2504101, ಮೊ.ನಂ: 9480806462 ಹಾಗೂ ಇ-ಮೇಲ್ dpudp.prisons-kar@gov.in ಅನ್ನು ಸಂಪರ್ಕಿಸಿ, ವಿವರಗಳೊಂದಿಗೆ ಸಂದರ್ಶನಕ್ಕೆ ನೋಂದಾಯಿಸಿ, ನಿಗಧಿಪಡಿಸಿದ ದಿನ ಮತ್ತು ಸಮಯಕ್ಕೆ ಸಂದರ್ಶನಕ್ಕೆ ಆಗಮಿಸಬಹುದಾಗಿದೆ ಎಂದು ಜಿಲ್ಲಾ ಕಾರಾಗೃಹ ಮತ್ತು ಸುಧಾರಣಾ ಸೇವೆಯ ಅಧೀಕ್ಷಕರ ಪ್ರಕಟಣೆ ತಿಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.