



ತೆಲಂಗಾಣ ರಾಜ್ಯದಲ್ಲಿ ಅಧಿಕಾರ ಹಿಡಿದಿರುವ ಕಾಂಗ್ರೆಸ್ ಪಕ್ಷವು ಇದೀಗ ನೂತನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಿದೆ. ತೆಲಂಗಾಣ ಕಾಂಗ್ರೆಸ್ ಅಧ್ಯಕ್ಷ ರೇವಂತ್ ರೆಡ್ಡಿ ಅವರು ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಮಾಡಲಿದ್ದಾರೆ.
ಹೊಸದಿಲ್ಲಿಯಲ್ಲಿ ನಡೆದ ಹೈಕಮಾಂಡ್ ಸಭೆಯ ಬಳಿಕ ಈ ಈ ಘೋಷಣೆ ಮಾಡಲಾಗಿದೆ. ಡಿಸೆಂಬರ್ 7 ರಂದು ರೇವಂತ್ ರೆಡ್ಡಿ ತೆಲಂಗಾಣ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. 2017 ರಲ್ಲಿ ತೆಲುಗು ದೇಶಂ ಪಕ್ಷದಿಂದ ಕಾಂಗ್ರೆಸ್‌ಗೆ ಬಂದ ರೇವಂತ್ ರೆಡ್ಡಿ ಬಳಿಕ ರಾಜ್ಯದ ಪ್ರಮುಖ ರಾಜಕಾರಣಿಯಾಗಿ ಬೆಳೆದು ಇದೀಗ ಸಿಎಂ ಆಗಲಿದ್ದಾರೆ. ಸಿಎಂ ಸ್ಥಾನದ ಆಕಾಂಕ್ಷಿಯಾಗಿದ್ದ ಉತ್ತಮ್ ಕುಮಾರ್ ರೆಡ್ಡಿ ಮತ್ತು ಭಟ್ಟಿ ವಿಕ್ರಮಾರ್ಕ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ಸುಗಬಹುದಾದ ಸಾಧ್ಯತೆ ಇದೆ. ಅದಲ್ಲದಿದ್ದರೆ ಅವರು ಕೇಳಿದ ಉತ್ತಮ ಖಾತೆ ಸಿಗಬಹುದು. ತೆಲಂಗಾಣದಲ್ಲಿ ರೊಟೇಶನ್ ಸಿಎಂ ಸೂತ್ರ ಇರುವುದಿಲ್ಲ ಎಂದು ಮೂಲಗಳು ತಿಳಿಸಿವೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.