



ಕಾರ್ಕಳ : ಇತ್ತೀಚೆಗೆ ಹೊರಡಿಸಿದ ಸಾಮಾನ್ಯ ಪ್ರವೇಶ ಪರೀಕ್ಷೆ ಕೆ-ಸಿಇಟಿ ಪರೀಕ್ಷೆಯ ಫಲಿತಾಂಶದಲ್ಲಿ ತಾಂತ್ರಿಕ ದೋಷದಿಂದ ಕೆಲ ವಿದ್ಯಾರ್ಥಿಗಳ ಫಲಿತಾಂಶವನ್ನು ತಡೆಹಿಡಿಯಲಾಗಿತ್ತು. ಆ ಪರಿಷೃತ ಫಲಿತಾಂಶವು ಪ್ರಕಟಗೊಂಡಿದ್ದು, ಇಂಜಿನಿಯರಿಂಗ್ ವಿಭಾಗದಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ನಿಶಾಂತ್ ಎನ್ ಹೆಗ್ಡೆ 1072(G55) ನೇ ರ‍್ಯಾಂಕ್ ಹಾಗೂ ಸಾತ್ವಿಕ್ ಬಿ.ಸಿ 1387(G55) ನೇ ರ‍್ಯಾಂಕ್ ಪಡೆಯುವುದರ ಮೂಲಕ ಜ್ಞಾನಸುಧಾದ 2 ಸಾವಿರದೊಳಗಿನ ರ‍್ಯಾಂಕ್‌ಗಳ ಸಂಖ್ಯೆ 43ಕ್ಕೆ ಏರಿಕೆಯಾಗಿದೆ.
ಜೊತೆಗೆ ಕಾಲೇಜಿನ 24 ವಿದ್ಯಾರ್ಥಿಗಳಿಗೆ ಕೆ-ಸಿಇಟಿ ಇಂಜಿನಯರಿಂಗ್‌ನಲ್ಲಿ ಸಾವಿರದೊಳಗಿನ ರ‍್ಯಾಂಕ್ ಬಂದಿರುವುದು ಹಾಗೂ ಪ್ರಣವ್ ಗುಜ್ಜರ್ ಕೃಷಿ ವಿಭಾಗದಲ್ಲಿ 6ನೇ ರ‍್ಯಾಂಕ್ ಹಾಗೂ ಇಂಜಿನಿಯರಿಂಗ್ ವಿಭಾಗದಲ್ಲಿ 68ನೇ ರ‍್ಯಾಂಕ್ ಗಳಿಸಿರುವುದನ್ನು ಸ್ಮರಿಸಿಕೊಳ್ಳಬಹುದಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.