logo
WhatsApp Image 2026-04-02 at 14.46.04.jpeg
hindalco everlast.jpeg

ಮುಡಾರಿನಲ್ಲಿ ರಿಕ್ಷಾ-ಬೈಕ್ ಡಿಕ್ಕಿ: ಬೈಕ್ ಸವಾರನಿಗೆ ಗಾಯ

ಟ್ರೆಂಡಿಂಗ್
share whatsappshare facebookshare telegram
13 Oct 2022
post image

ಕಾರ್ಕಳ: ಬಜಗೋಳಿ ಸಮೀಪದ ಮುಡಾರು ಗ್ರಾಮದ ಆಲ್ ದಟ್ಟ ಸೇತುವೆ ಬಳಿ ಗುರುವಾರ ಬೆಳಿಗ್ಗೆ ರಿಕ್ಷಾ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಗಾಯಗೊಂಡ ಘಟನೆ ನಡೆದಿದೆ. ಗಾಯಗೊಂಡ ಬೈಕ್ ಸವಾರ ಕೆರ್ವಾಶೆ ಅಂಚೆ ಕಚೇರಿಯ ಪೋಸ್ಟ್ ಮ್ಯಾನ್ ಶಿವರಾಜ್ ಎಂದು ತಿಳಿದು ಬಂದಿದ್ದು ಅವರು ಬಜಗೋಳಿ ಕಡೆಗೆ ಹೋಗುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ರಿಕ್ಷಾ ಆಲ್ ದಟ್ಟ ಸೇತುವೆ ಬಳಿಯ ಅಪಾಯಕಾರಿ ತಿರುವಿನಲ್ಲಿ ಈ ಅಪಘಾತ ನಡೆದಿದೆ. ಬೈಕ್ ಸವಾರ ಶಿವರಾಜ್ ಅವರ ತಲೆ ಹಾಗೂ ಕೈ ಕಾಲಿಗೆ ಗಾಯಗಳಾಗಿದ್ದು ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.