logo
WhatsApp Image 2026-04-02 at 14.46.04.jpeg
hindalco everlast.jpeg

ರಸ್ತೆ ಅಪಘಾತ: ಉಡುಪಿ ನಗರಸಭೆಯ ವ್ಯವಸ್ಥಾಪಕ ಮೃತ್ಯು

ಟ್ರೆಂಡಿಂಗ್
share whatsappshare facebookshare telegram
22 Nov 2021
post image

ಉಡುಪಿ: ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ನಗರಸಭೆಯ ವ್ಯವಸ್ಥಾಪಕ ವೆಂಕಟರಮಣ ಎಂಬವರು ಚಿಕಿತ್ಸೆ ಫಲಕಾರಿಯಾಗದೆ‌ ಇಂದು ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಭಾನುವಾರ ಕುಂಜಿಬೆಟ್ಟು ಮುಖ್ಯರಸ್ತೆ ಡಿವೈಡರ್ ದಾಟುತ್ತಿದ್ದ ವೇಳೆ ಎಡವಿ ರಸ್ತೆಗೆಬಿದ್ದಿದ್ದರು. ಈ ಸಂದರ್ಭದಲ್ಲಿ ಓಮಿನಿ ಕಾರೊಂದು ಇವರಿಗೆ ಡಿಕ್ಕಿ ಹೊಡೆದಿದ್ದು, ಇದರಿಂದ ವೆಂಕಟರಮಣ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಸೋಮವಾರ ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ. ಮೃತರು ಪತ್ನಿ,ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.