



ಬೆಂಗಳೂರು: ನಂದಿನಿ ಲೀಟರ್ ಹಾಲಿಗೆ 3 ರೂ. ಹೆಚ್ಚಳ ಮಾಡಲಾಗುವುದು. ಈ ದರ ಏರಿಕೆಯಿಂದ ರೈತರಿಗೆ ವರದಾನವಾಗಲಿದೆ ಎಂದು ಕೆಎಂಎಫ್ ಅಧ್ಯಕ್ಷ, ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ. ರಾಜ್ಯದ 16 ಜಿಲ್ಲಾ ಹಾಲು ಒಕ್ಕೂಟಗಳು, ಕೆಎಂಎಫ್ಗೆ ಹಾಲಿನ ದರ ಪರಿಷ್ಕರಿಸುವಂತೆ ಪ್ರಸ್ತಾವನೆ ಸಲ್ಲಿಸಿವೆ. ರೈತರ ಹೈನುಗಾರಿಕೆ ಹಿತದೃಷ್ಟಿಯಿಂದ ಹಾಲಿನ ದರ ಏರಿಕೆ ಮಾಡುವುದು ಅನಿವಾರ್ಯವಾಗಿದೆ. ಹಾಲಿನ ದರ ಪರಿಷ್ಕರಣೆ ಸಂಬಂಧ ಈಗಾಗಲೇ ಸಾಮಾನ್ಯ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.. ಇದರಿಂದ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿಯಾದಂತಾಗಿದೆ . ಹೈನುಗಾರರು ಪಶು ಆಹಾರದ ಬೆಲೆ ಏರಿಕೆ ಯಿಂದ ಹೈರಾಣರಾಗಿದ್ದು .ರಾಜ್ಯದಲ್ಲಿ ಕಳೆದ ವರ್ಷದಿಂದ 2022ರಲ್ಲಿ ಒಂದು ಲಕ್ಷ ಲೀಟರ್ ಹಾಲುತ್ಪಾದನೆ ಕಡಿಮೆಯಾಗಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.