logo
WhatsApp Image 2026-04-02 at 14.46.04.jpeg
hindalco everlast.jpeg

ಪ್ರಯಾಣಿಕರಿಂದ ಹೆಚ್ಚಿನ ದರದ ಟಿಕೆಟ್ ವಸೂಲಿ: ಖಾಸಗಿ ಬಸ್ ಕಂಪೆನಿಗಳ ವಿರುದ್ಧ ಪ್ರಕರಣ ದಾಖಲಿಸಿದ ಆರ್ ಟಿ ಒ

ಟ್ರೆಂಡಿಂಗ್
share whatsappshare facebookshare telegram
18 Sept 2026
post image

ಬೆಂಗಳೂರು:** ರಾಜ್ಯದ ಸಿನಿಮಾ ಪ್ರೇಕ್ಷಕರಿಗೆ ಟಿಕೆಟ್ ದರದ ಮೇಲೆ ಹೆಚ್ಚುವರಿ ಹೊರೆ ಬೀಳುವ ಸಾಧ್ಯತೆ ಇದೆ. ಸಿನಿಮಾ ಟಿಕೆಟ್‌ಗಳ ಮೇಲೆ ಶೇ.2ರಷ್ಟು ಸೆಸ್ (ಉಪಕರ) ವಿಧಿಸುವ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದ್ದು, ಸೆಪ್ಟೆಂಬರ್ 30ರಿಂದ ಹೊಸ ನಿಯಮ ಜಾರಿಗೆ ಬರಲಿದೆ.

ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆಯಡಿ ಈ ಸೆಸ್ ವಿಧಿಸಲಾಗುತ್ತಿದೆ. 2024ರ ಸೆಪ್ಟೆಂಬರ್ 23ರಂದು ರಾಜ್ಯಪಾಲರ ಅಂಕಿತ ದೊರೆತಿದ್ದು, ಸೆಪ್ಟೆಂಬರ್ 24ರಂದು ರಾಜ್ಯಪತ್ರದಲ್ಲಿ ಅಧಿಸೂಚನೆ ಪ್ರಕಟಿಸಲಾಗಿತ್ತು. ಇದೀಗ ಕಾಯ್ದೆಯ ಅನುಷ್ಠಾನಕ್ಕೆ ಚಾಲನೆ ದೊರೆತಿದೆ.

₹200 ಟಿಕೆಟ್‌ಗೆ ₹4 ಹೆಚ್ಚುವರಿ

ಹೊಸ ನಿಯಮದಂತೆ ಸಿನಿಮಾ ಟಿಕೆಟ್‌ನ ಮುಖಬೆಲೆಯ ಮೇಲೆ ಶೇ.2ರಷ್ಟು ಸೆಸ್ ವಿಧಿಸಲಾಗುತ್ತದೆ. ಉದಾಹರಣೆಗೆ ₹200ರ ಟಿಕೆಟ್‌ಗೆ ₹4 ಹೆಚ್ಚುವರಿ ಸೆಸ್ ಪಾವತಿಸಬೇಕಾಗುತ್ತದೆ.

ಟಿಕೆಟ್‌ಗಳಿಂದ ಸಂಗ್ರಹವಾಗುವ ಸೆಸ್ ಮೊತ್ತವನ್ನು ಸಿನಿಮಾ ಹಾಗೂ ಸಾಂಸ್ಕೃತಿಕ ಕ್ಷೇತ್ರದ ಕಾರ್ಮಿಕರ ಕಲ್ಯಾಣ ಮತ್ತು ಕ್ಷೇಮಾಭಿವೃದ್ಧಿ ಯೋಜನೆಗಳಿಗೆ ಬಳಸಲು ಉದ್ದೇಶಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ.

ಹೀಗಾಗಿ ಸೆಪ್ಟೆಂಬರ್ 30ರಿಂದ ರಾಜ್ಯದ ಚಿತ್ರಮಂದಿರಗಳಲ್ಲಿ ಸಿನಿಮಾ ವೀಕ್ಷಿಸುವ ಪ್ರೇಕ್ಷಕರಿಗೆ ಟಿಕೆಟ್ ದರದ ಜತೆಗೆ ಶೇ.2ರಷ್ಟು ಹೆಚ್ಚುವರಿ ಸೆಸ್ ಪಾವತಿಸಬೇಕಾಗಲಿದೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.