



ಹೆಬ್ರಿ : ರಾಷ್ಟ್ರಧ್ವಜದ ಬದಲು ಕೇಸರಿ ಧ್ವಜವನ್ನು ಹಾರಿಸುತ್ತೇವೆ ಎಂದು ರಾಷ್ಟ್ರಧ್ವಜವನ್ನು ಅವಮಾನಿಸಿ ದೇಶದ್ರೋಹದ ಹೇಳಿಕೆ ನೀಡಿ ಅಶಾಂತಿಗೆ ಕಾರಣರಾದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಸಂಪುಟದಿಂದ ವಜಾ ಗೊಳಿಸಿ ಪ್ರಕರಣ ದಾಖಲಿಸುವಂತೆ ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುದ್ರಾಡಿ ಮಂಜುನಾಥ ಪೂಜಾರಿ ಒತ್ತಾಯಿಸಿದರು.
ಅವರು ಸೋಮವಾರ ಹೆಬ್ರಿ ಬ್ಲಾಕ್ ಕಾಂಗ್ರೆಸ್ ಕಚೇರಿಯ ಬಳಿ ಈಶ್ವರಪ್ಪ ವಿರುದ್ಧ ಪ್ರತಿಭಟನೆ ನಡೆಸಿ ಬಳಿಕ ತಹಶೀಲ್ಧಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ನೀರೆ ಕೃಷ್ಣ ಶೆಟ್ಟಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರಂಜನಿ ಹೆಬ್ಬಾರ್ ಕಬ್ಬಿನಾಲೆ, ವಿವಿಧ ವಿಭಾಗಗಳ ಪ್ರಮುಖರಾದ ಎಚ್. ಜನಾರ್ಧನ್, ಶಶಿಕಲಾ ಪೂಜಾರಿ. ಶಶಿಕಲಾ ಪೂಜಾರಿ, ಮುನಿಯಾಲು ರವಿ ಪೂಜಾರಿ,ಅಜೆಕಾರು ರಾಮಕೃಷ್ಣ ಶೆಟ್ಟಿ, ಯುವ ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಶೆಟ್ಟಿ, ಅಜೆಕಾರಿನ ಆಸ್ಟೀನ್ ರಾಡ್ರೀಗಸ್ ಸಹಿತ ಹಲವರು ಉಪಸ್ಥಿತರಿದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.