



ಉಚ್ಚಿಲ: ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಪುನರ್ ಪ್ರತಿಷ್ಠೆ, ರಥೋತ್ಸವ, ಬ್ರಹ್ಮಕಲಶೋತ್ಸವ, ನಾಗಮಂಡಲೋತ್ಸವ ಮುಂತಾದ ಧಾರ್ಮಿಕ ಕಾರ್ಯಕ್ರಮದ ಅನ್ನಸಂತರ್ಪಣೆಗೆ ಎರ್ಮಾಳು ಸೇಕ್ರೆಡ್ ಹಾರ್ಟ್ ಚರ್ಚ್ ವತಿಯಿಂದ ಹೊರೆಕಾಣಿಕೆಯು ಸಮರ್ಪಣೆಗೊಂಡಿತು. ಈ ಸಂದರ್ಭದಲ್ಲಿ ಜೇಮ್ಸ್ ಡಿಸೋಜ, ವೆಲೇರಿಯನ್ ಡಿಸೋಜ, ಹಿಲರಿ ಡಿಸೋಜ, ವೆರೊನಿಕ ಬರ್ಬೋಜ, ಶಾರ್ಲೆಟ್ ಫುರ್ಟಾಡೋ, ವನಿತಾ ಡಿಸೋಜ, ಗ್ರೆಟ್ಟಾ ಡಿಸೋಜ, ಲೀನ ಡಿಸೋಜ, ರೀನಾ ಡಿಸೋಜ, ಅಲೈಸ್ ಡಿಸೋಜ ಮೊದಲಾದವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಹಾಗೂ ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ನಾಡೋಜ ಡಾ|| ಜಿ ಶಂಕರ್, ದ.ಕ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ ಕೋಟ್ಯಾನ್, ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಶ್ರೀ ವಾಸುದೇವ ಸಾಲ್ಯಾನ್, ಜೀರ್ಣೋದ್ಧಾರ ಸಮಿತಿಯ ಕೋಶಾಧಿಕಾರಿ ವಿನಯ ಕರ್ಕೆರ ಉಪಸ್ಥಿತರಿದ್ದು ಗೌರವಪೂರ್ವಕವಾಗಿ ಸ್ವಾಗತಿಸಿದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.