



ಭುವನೇಶ್ವರ: ಇಂಗ್ಲಿಷ್ ಕಾವ್ಯಕ್ಕಾಗಿ ಕೇಂದ್ರ ಸಾಹಿತ್ಯ ಅಕಾಡೆಮಿಯ ಪ್ರಥಮ ಪ್ರಶಸ್ತಿಗೆ ಭಾಜನರಾಗಿದ್ದ ಸಾಹಿತಿ ಜಯಂತ ಮಹಾಪಾತ್ರ ಅವರು ಕಟಕ್’ನಲ್ಲಿ ಭಾನುವಾರ ನಿಧನರಾದರು. ಅವರಿಗೆ 95 ವರ್ಷ ವಯಸ್ಸಾಗಿತ್ತು.
ಅವರಿಗೆ ಪತ್ನಿ, ಪುತ್ರ ಇದ್ದು, ನ್ಯುಮೋನಿಯಾ ಮತ್ತು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ.
1928ರ ಅಕ್ಟೋಬರ್ 22ರಂದು ಕಟಕ್ ನಲ್ಲಿ ಜನಿಸಿದ್ದರು. 2009ರಲ್ಲಿ ಅವರಿಗೆ ಪದ್ಮಶ್ರೀ ಪ್ರಶಸ್ತಿಗೆ ಪಾತ್ರರಾಗಿದ್ದರು. ಅಸಹಿಷ್ಣುತೆ ವಿರುದ್ಧದ ಪ್ರತಿಭಟನಾರ್ಥವಾಗಿ 2015ರಲ್ಲಿ ಅವರು ಅದನ್ನು ವಾಪಸ್ ನೀಡಿದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.