



ಬೆಂಗಳೂರು : ನಗರದಲ್ಲಿ ಅಮುಲ್ ಉತ್ಪನ್ನಗಳ ಮಾರಾಟಕ್ಕೆ ಭಾರೀ ವಿರೋಧ ವ್ಯಕ್ತಪಡಿಸಿದ್ದು ಕರ್ನಾಟಕ ರಕ್ಷಣಾ ವೇದಿಕೆ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದೆ.
ಕರ್ನಾಟಕ ವಿಧಾನಸಭಾ ಚುನಾವಣೆ ಸಿದ್ಧತೆ ನಡುವೆ ಕರ್ನಾಟಕದ ಮಾರುಕಟ್ಟೆಗಳಲ್ಲಿ ಗುಜರಾತ್ ಮೂಲದ ಡೈರಿ ಸಹಕಾರ ಸಂಸ್ಥೆಯ ಅಮೂಲ್ ಹಾಲಿನ ಮಾರಾಟವನ್ನು ವಿರೋಧಿಸಿದ್ದು, ನಂದಿನಿ ಉತ್ಪನ್ನಗಳ ಬಳಕೆ ಮಾಡಲು ಒತ್ತಾಯಿಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆಯಲ್ಲಿ ನೂರಾರು ಜನರು ಭಾಗಿಯಾಗಿದ್ದರು.
ಕರ್ನಾಟಕದ ಎಲ್ಲ ಬ್ಯಾಂಕುಗಳನ್ನು ನುಂಗಿ ನೀರು ಕುಡಿದ ಈ ಗುಜರಾತಿನವರು ಈಗ ದೇಶದ ಬಹುದೊಡ್ಡ ಹಾಲಿನ ಉದ್ಯಮಕ್ಕೆ ಕೈಹಾಕಿ ದಿವಾಳಿ ಮಾಡಲು ಹೊರಟಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡಿಗರು ಆಕ್ರೋಶ ವ್ಯಕ್ಯಪಡಿಸಿದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.