logo
WhatsApp Image 2026-04-02 at 14.46.04.jpeg
hindalco everlast.jpeg

ಸಾಲಿಗ್ರಾಮ ಪ.ಪಂ.: ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಬಳಕೆ ಮಾಡಿದ್ದಲ್ಲಿ ಕಾನೂನು ಕ್ರಮ ಜಾರಿ

ಟ್ರೆಂಡಿಂಗ್
share whatsappshare facebookshare telegram
21 Jul 2023
post image

 

     ಉಡುಪಿ: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪಿಯಲ್ಲಿ ಸಾರ್ವಜನಿಕರು, ಅಂಗಡಿ ಮಾಲೀಕರು, ಸಗಟು ಮಾರಾಟಗಾರರು, ಚಿಲ್ಲರೆ ವ್ಯಾಪಾರಿ ಮತ್ತು ಮಾರಾಟಗಾರರು ಪರಿಸರಕ್ಕೆ ಹಾನಿಯುಂಟು ಮಾಡುವಂತಹ ನಿಷೇಧಿತ ಪಾಸ್ಟಿಕ್ ವಸ್ತುಗಳನ್ನು ಬಳಕೆ ಮತ್ತು ಮಾರಾಟ, ಸಂಗ್ರಹಣೆ, ಸಾಗಾಣಿಕೆ ಮಾಡದಂತೆ ಈಗಾಗಲೇ ಹಲವಾರು ಬಾರಿ ತಿಳಿಸಿದ್ದರೂ ನಿಷೇಧಿತ ಬ್ಲ್ಯಾಸ್ಟಿಕ್ ವಸ್ತುಗಳನ್ನು ಬಳಸುತ್ತಿರುವುದು ಕಂಡುಬರುತ್ತಿದೆ.

    ಪರಿಸರಕ್ಕೆ ಹಾನಿಯುಂಟು ಮಾಡುವ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಬಳಕೆಯನ್ನು ತಕ್ಷಣವೇ ನಿಲ್ಲಿಸಬೇಕು. ತಪ್ಪಿದಲ್ಲಿ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ಪಟ್ಟಣ ಪಂಚಾಯತ್ ವತಿಯಿಂದ ವಶಪಡಿಸಿಕೊಳ್ಳುವುದರ ಜೊತೆಗೆ ಈ ಅಧಿಸೂಚನೆಯನ್ನು ಉಲ್ಲಂಘಿಸುವವರ ವಿರುದ್ಧ ಸೂಕ್ತ ದಂಡ ವಿಧಿಸಿ, ಉದ್ಯಮ ಪರವಾನಿಗೆ ರದ್ದುಪಡಿಸಿ ಸಂಬಂಧಪಟ್ಟ ನ್ಯಾಯಾಲಯದಲ್ಲಿ ಪರಿಸರ ಸಂರಕ್ಷಣೆ ಕಾಯ್ದೆಯಡಿ ದೂರು ದಾಖಲಿಸಿ ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ಸಾಲಿಗ್ರಾಮ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.