



ಬೈಂದೂರು: ಮಹಿಳಾ ಮೀನುಗಾರರ ಸಾಲ ಮನ್ನಾ ಯೋಜನೆ ದುರುಪಯೋಗಪಡಿಸಿಕೊಂಡು 1.50 ಕೋ.ರೂ. ವಂಚನೆ ಮಾಡಿರುವುದಾಗಿ ಉಪ್ಪುಂದ ಶ್ರೀ ಮೂಕಾಂಬಿಕಾ ಗ್ರಾಮೀಣಾಭಿವೃದ್ಧಿ ಟ್ರಸ್ಟ್ ವಿರುದ್ಧ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮೊತ್ತದ ವಂಚನೆ ಆಗಿರುವುದರಿಂದ ಪ್ರಕರಣದ ತನಿಖೆಯನ್ನು ಉಡುಪಿಯ ಸೆನ್ ಠಾಣೆಗೆ ವರ್ಗಾಯಿಸಲಾಗಿದೆ. ಮೂಕಾಂಬಿಕಾ ವಿವಿದೋದ್ಧೇಶ ಸಹಕಾರಿ ಸಂಘದ ಉಪಾಧ್ಯಕ್ಷ ರಾಮ ಖಾರ್ವಿ ಅವರು ನೀಡಿದ ದೂರಿನಂತೆ ಸಂಘದ ನಿರ್ದೇಶಕರು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಶ್ರೀ ಮೂಕಾಂಬಿಕಾ ಗ್ರಾಮೀಣಾಭಿವೃದ್ಧಿ ಟ್ರಸ್ಟ್ ರಚಿಸಿಕೊಂಡಿದ್ದು, ಅದರ ಹೆಸರಲ್ಲಿ ಚೇರ್ಮನ್ ಬೇಬಿ ಕೊಠಾರಿ, ಕಾರ್ಯದರ್ಶಿ ಹರೀಶ್ ಖಾರ್ವಿ, ಖಜಾಂಚಿ ರಾಮದಾಸ ಖಾರ್ವಿ ಅವರು ಯೂನಿಯನ್ ಬ್ಯಾಂಕಿನ ಕೊಲ್ಲೂರು ಶಾಖಾ ವ್ಯವಸ್ಥಾಪಕ ರಾಮಕೃಷ್ಣ ದೇವಾಡಿಗರೊಂದಿಗೆ ಒಳ ಒಪ್ಪಂದ ಮಾಡಿಕೊಂಡು, ನಕಲಿ ಫಲಾನುಭವಿಗಳನ್ನು ಸೃಷ್ಟಿಸಿ ಸಾಲ ಮನ್ನಾ ಮಾಡಿಸಿಕೊಂಡು ಹಣ ದುರ್ಬಳಕೆ ಮಾಡಿರುವುದಾಗಿ ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.