logo
WhatsApp Image 2026-04-02 at 14.46.04.jpeg
hindalco everlast.jpeg

ಸ್ಯಾಂಡಲ್ ವುಡ್ ಹಿರಿಯ ನಟ ಎಂ.ಎಸ್.ಉಮೇಶ್ ವಿಧಿವಶ.!

ಟ್ರೆಂಡಿಂಗ್
share whatsappshare facebookshare telegram
30 Nov 2025
post image

ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಸ್ಯಾಂಡಲ್ ವುಡ್ ಹಿರಿಯ ನಟ ಎಂ.ಎಸ್.ಉಮೇಶ್ ಅವರು ಭಾನುವಾರ ವಿಧಿವಶರಾಗಿದ್ದಾರೆ.

ಅನಾರೋಗ್ಯದಿಂದಾಗಿ ಹಲವು ದಿನಗಳಿಂದ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದ ಉಮೇಶ್ ಅವರು, ಚಿಕಿತ್ಸೆ ಫಲಕಾರಿಯಾಗದೆ ಇಂದು ಕಿದ್ವಾಯಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಎಂ. ಎಸ್. ಉಮೇಶ್ ಮೈಸೂರಿನಲ್ಲಿ ಏಪ್ರಿಲ್ 22, 1945ರಲ್ಲಿ ಜನಿಸಿದರು. ರಂಗಭೂಮಿ ಮತ್ತು ಚಲನಚಿತ್ರ ನಟರಾಗಿ 1948ರಿಂದ ಸಕ್ರಿಯರಾಗಿದ್ದರು.

ಮಕ್ಕಳ ರಾಜ್ಯ, ಭಾಗ್ಯವಂತರು, ಕಿಲಾಡಿ ಜೋಡಿ, ಗುರು ಶಿಷ್ಯರು, ಭೂಮಿಗೆ ಬಂದ ಭಗವಂತ, ಹಾಲು ಜೇನು, ಕಾಮನಬಿಲ್ಲು, ಅಪೂರ್ವ ಸಂಗಮ, ಶೃತಿ ಸೇರಿದಾಗ, ಮೇಘ ಮಂದಾರ, ಆಕಸ್ಮಿಕ, ಸರ್ವರ್ ಸೋಮಣ್ಣ, ಮೇಘಮಾಲೆ, ನನ್ನಾಸೆಯ ಹೂವೆ, ಜಾಕಿ, ರ್ಯಾಂಬೊ, ಮುಸ್ಸಂಜೆ ಮಾತು, ಡೇರ್ ಡೆವಿಲ್ ಮುಸ್ತಫಾ, ಹಗಲುವೇಷ ಸೇರಿದಂತೆ 350ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.

“ಅಯ್ಯಯ್ಯೋ ಇವ್ರೂ ನನ್ನ ಅಪಾರ್ಥ ಮಾಡ್ಕೊಂಬಿಟ್ರಲ್ಲ. ನಾನೇನೂ ಬೇಕೂ ಅಂತ ಹೀಗ್ ಮಾಡ್ಲಿಲ್ಲ….. ಹೇಳ್ಕೊಳ್ಳೋಣ ಅಂದ್ರೆ ನನ್ಹೆಂಡ್ತಿ ಕೂಡಾ ಊರಲ್ಲಿಲ್ವೆ..” ಹೀಗೆ ತಮ್ಮ ಅಸಾಮಾನ್ಯ ರೀತಿಯ ಡೈಲಾಗ್, ಅಭಿನಯದ ಮೂಲಕ ಕನ್ನಡ ಚಿತ್ರರಸಿಕರ ಮನ ಗೆದ್ದಿದ್ದರು.

ಹಾಸ್ಯ ಕಲಾವಿದ ಉಮೇಶ್ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಿರೋಧ ಪಕ್ಷದ ನಾಯಕ ಆರ್‌. ಅಶೋಕ ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.