


ಹೆಬ್ರಿ: ಹೆಬ್ಬೇರಿ ಉತ್ಸವದಲ್ಲಿ ಸಂಜೀವಿನಿ ವಸ್ತು ಪ್ರದರ್ಶನ ,ಮಾರಾಟ ಮೇಳ ಹಾಗೂ ಸಾಂಸ್ಕೃತಿಕ ಕಲರವ. ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ- ಸಂಜೀವಿನಿ, ಜಿಲ್ಲಾ ಪಂಚಾಯತ್ ಉಡುಪಿ, ತಾಲೂಕು ಪಂಚಾಯತ್ ಹೆಬ್ರಿ ಗ್ರಾಮ ಪಂಚಾಯತ್ ಹೆಬ್ರಿ, ಹಾಗೂ ಹೆಬ್ಬೇರಿ ಸಂಜೀವಿನಿ ತಾಲೂಕು ಮಟ್ಟದ ಒಕ್ಕೂಟ ಇವರ ಸಂಯುಕ್ತ ಆಶ್ರಯದಲ್ಲಿ ಹೆಬ್ಬೇರಿ ಉತ್ಸವದ ಪ್ರಯುಕ್ತ
ಜಿಲ್ಲಾ ಮಟ್ಟದ ಸಂಜೀವಿನಿ ಮಾರಾಟ ಮೇಳ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಹೆಬ್ರಿ ರಾಮ ಮಂದಿರದ ಮುಂಭಾಗದಲ್ಲಿ ದಿನಾಂಕ 13.02.2025 ರಿಂದ 15.02.2025 ರ ವರಗೆ ಹಮ್ಮಿಕೊಳ್ಳಲಾಗಿದ್ದು, ಈ ಮಾರಾಟ ಮೇಳದಲ್ಲಿ ಮಹಿಳೆಯರು ತಯಾರಿಸಿದ ಗ್ರಹ ಉಪಯೋಗಿ ವಸ್ತುಗಳು, ಕರಕುಶಲ ವಸ್ತುಗಳು, ಟೆರೇಕೋಟಾ ವಸ್ತುಗಳು,ಕೃತಕ ಆಭರಣ,ಬಟ್ಟೆ ಬ್ಯಾಗ್, ಆಯುರ್ವೇದಿಕ್ ಉತ್ಪನ್ನಗಳು, ಹೆಬ್ರಿ ಹನಿ,ಇತ್ಯಾದಿ ಉತ್ಪನ್ನಗಳು ಲಭ್ಯವಿರುತ್ತದೆ. ಹಾಗೂ ಸಂಜೆ ಯ ವೇಳೆಗೆ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸಂಜೀವಿನಿ ಮಹಿಳೆಯರು, ಮಕ್ಕಳು, ಹಾಗೂ ಕಾಲೇಜು ವಿದ್ಯಾರ್ಥಿಗಳಿಂದ ವಿವಿಧ ವಿನೋದಾವಳಿಗಳನ್ನು ಹಮ್ಮಿಕೊಂಡಿದ್ದು, ಈ ಎಲ್ಲಾ ಕಾರ್ಯಕ್ರಮಕ್ಕೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಂಜೀವಿನಿ ಸ್ವ ಸಹಾಯ ಸಂಘದ ಮಹಿಳೆಯರು ತಯಾರಿಸಿದ ಉತ್ಪನ್ನಗಳನ್ನು ಖರೀದಿಸಿ ಪ್ರೋತ್ಸಾಹ ನೀಡಬೇಕೆಂದು ತಾಲೂಕು ಪಂಚಾಯತ್ ಹೆಬ್ರಿ ಯ ಪ್ರಕಟಣೆ ತಿಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.