



ಹೆಬ್ರಿ : ವರಂಗ ಗ್ರಾಮ ಪಂಚಾಯಿತಿ ವತಿಯಿಂದ ಅಖಿಲ ಗೋವಾ ಕನ್ನಡಿಗರ ಮಹಾ ಸಂಘ ನೀಡುವ ಸಮಾಜಸೇವಾ ರತ್ನ ಪ್ರಶಸ್ತಿ ಪುರಸ್ಕೃತರಾದ ಎಳ್ಳಾರೆ ಮಾವಿನಕಟ್ಟೆ ಶಂಕರ ಶೆಟ್ಟಿ ಮುನಿಯಾಲು ಅವರನ್ನು ವರಂಗ ಗ್ರಾಮ ಪಂಚಾಯಿತಿ ವತಿಯಿಂದ ಇತ್ತೀಚೆಗೆ ಸನ್ಮಾನಿಸಲಾಯಿತು. ವರಂಗ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಉಷಾ ಹೆಬ್ಬಾರ್, ಮೆಸ್ಕಾಂ ನಿರ್ದೇಶಕ ದಿನೇಶ ಪೈ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಜ್ಯೋತಿ ಹರೀಶ ಪೂಜಾರಿ, ಹೆಬ್ರಿ ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ರಮೇಶ ಕುಮಾರ್ ಶಿವಪುರ, ಮುನಿಯಾಲು ಲಕ್ಷ್ಮೀವೆಂಕಟರಮಣ ದೇವಸ್ಥಾನದ ಆಡಳಿತ ಮೋಕ್ತೇಸರ ಶ್ರೀಧರ ಪೈ ಮುಂತಾದವರು ಉಪಸ್ಥಿತರಿದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.