



ಮಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಕುರಿತು ಪೊಲೀಸರು ನಿಷ್ಪಕ್ಷಪಾತ ತನಿಖೆ ನಡೆಸಲಿದ್ದು, ತನಿಖೆಯ ಪ್ರಾಥಮಿಕ ವರದಿ ಬಂದ ಬಳಿಕ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದಲ್ಲಿ ಮಂಗಳವಾರ ಮಾಧ್ಯಮದ ಜತೆ
ಮಾತನಾಡಿದ ಅವರು, ಕಾಂಗ್ರೆಸ್ ಸರಕಾರದ ಆಡಳಿತದ ಕಾಲದಲ್ಲಿ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಾಗ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅಥವಾ ಬೇರೆ ಸಚಿವರು ರಾಜೀನಾಮೆ ನೀಡಿದ್ದಾರೆಯೇ? ಎಂದು ಪ್ರಶ್ನಿಸಿದರು.
ಪ್ರತಿ ಜೀವಕ್ಕೂ ಮೌಲ್ಯ ಇದೆ. ವ್ಯಕ್ತಿಗೆ ಅವರದ್ದೇ ಜೀವನ ಇದೆ. ಅದನ್ನು ಗೌರವಿಸಬೇಕು. ನಾವು ತನಿಖೆಯಲ್ಲಿ ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡುತ್ತಿದ್ದೇವೆ. ಪ್ರಾಥಮಿಕ ಮಾಹಿತಿ ವರದಿ ಆಧಾರದಲ್ಲಿ ಕ್ರಮ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ನೀಡಿದರು.
ಮುಂದಿನ ಚುನಾವಣೆಯನ್ನು ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳ ಆಧಾರದಲ್ಲಿಯೇ ಎದುರಿಸಲಿದ್ದೇವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದ ಬೊಮ್ಮಾಯಿ ಹೇಳಿದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.