logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಸಾಣೂರು : ಮಕ್ಕಳ ದಿನಾಚರಣೆ

ಟ್ರೆಂಡಿಂಗ್
share whatsappshare facebookshare telegram
19 Nov 2023
post image

ಕಾರ್ಕಳ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಾರ್ಕಳ ಇದರ ವತಿಯಿಂದ ಸಾಣೂರು ಪುಲ್ಕೇರಿ ಅಂಗನವಾಡಿ ಕೇಂದ್ರದಲ್ಲಿ ದಿನಾಂಕ ನವೆಂಬರ್ 16 ಗುರುವಾರದಂದು ಮಕ್ಕಳ ದಿನಾಚರಣೆ ಸಂಭ್ರಮದಿಂದ ಆಚರಿಸಲಾಯಿತು.

ಸಾಣೂರು ಗ್ರಾಮ ಪಂಚಾಯತ್ ಪಂಚಾಯತ್ ಅಧ್ಯಕ್ಷರಾದ ಯುವರಾಜ್ ಜೈನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.

ಮಕ್ಕಳ ದಿನಾಚರಣೆಯನ್ನು ಜ್ಯೋತಿ ಪ್ರಜ್ವಲನದ ಮೂಲಕ ಮಂಗಳೂರು ಕೆಎಂಎಫ್ ನಿರ್ದೇಶಕರು ಮತ್ತುbಸಾಣೂರು ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷರಾದ ಸಾಣೂರು ನರಸಿಂಹ ಕಾಮತ್ ಉದ್ಘಾಟಿಸಿದರು.

"ಮಕ್ಕಳಿಗೆ ನಾವು ನೀಡುವ ಪ್ರೀತಿ ಮತ್ತು ಕಾಳಜಿ ನಾಳೆ ನಮ್ಮ ದೇಶದ ಭವಿಷ್ಯವಾಗಿ ಅರಳುತ್ತದೆ".

ಮಕ್ಕಳ ಮನಸ್ಸು ಯಾವಾಗಲೂ ದೀಪ ಬೆಳಗಿದ ಹಾಗೆ ಬೆಳಗಲಿ, ಮಕ್ಕಳ ಜೊತೆಗೆ ನಮ್ಮೆಲ್ಲರ ಜೀವನೋತ್ಸಾಹ ಇಮ್ಮಡಿಯಾಗಲಿ ಎಂದು ಶುಭ ಹಾರೈಸಿದರು.

ನಮ್ಮ ದೇಶದ ಮೊದಲ ಪ್ರಧಾನಿ ಶ್ರೀ ಜವಾಹರ ಲಾಲ್ ನೆಹರೂ ರವರ ಜನ್ಮದಿನದ ನೆನಪಿಗಾಗಿ ಆಚರಿಸುವ " ಮಕ್ಕಳ ದಿನಾಚರಣೆ" ಪ್ರಯುಕ್ತ ಅವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಲಾಯಿತು.ಆಚರಿಸುವ " ಮಕ್ಕಳ ದಿನಾಚರಣೆ" ಪ್ರಯುಕ್ತ ಅವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಲಾಯಿತು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕರಾದ ಶ್ರೀಮತಿ ಉಮಾ ಇವರು ಮಾತನಾಡಿ ಮಣ್ಣಿನ ಮುದ್ದೆಯಂತಿರುವ ಮಕ್ಕಳನ್ನು ಅಂಗನವಾಡಿಯಲ್ಲಿ ಶಾಲಾ ಪೂರ್ವ ಶಿಕ್ಷಣದ ಮೂಲಕ ಅವರ ಭವಿಷ್ಯ ರೂಪಗೊಳ್ಳುವುದು ಎಂದರು.

ಸಾಣೂರು ಗ್ರಾಮದಲ್ಲಿರುವ ಅಂಗನವಾಡಿ ಕೇಂದ್ರಗಳಲ್ಲಿ ಪುಲ್ಕೇರಿ ಅಂಗನವಾಡಿಯಲ್ಲಿ ಅತಿ ಹೆಚ್ಚು ಮಕ್ಕಳ ಸಂಖ್ಯೆಯಿದ್ದು, ವರ್ಷವಿಡಿ ಮಕ್ಕಳ ಮನೋವಿಕಾಸಕ್ಕಾಗಿ ವೈವಿಧ್ಯಮಯ *ಕಾರ್ಯಕ್ರಮಗಳನ್ನು ಸಮುದಾಯದ ಸಹಭಾಗಿತ್ವದೊಂದಿಗೆ ಹಮ್ಮಿಕೊಳ್ಳುತ್ತಿರುವುದು ಸಂತಸದಾಯಕ ವಿಚಾರಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಹೆದ್ದಾರಿ ವಿಸ್ತರಣೆ ಯಾಗುವಾಗ ಅಂಗನವಾಡಿ ಕೇಂದ್ರದ ನಿವೇಶನ ಮತ್ತು ಕಟ್ಟಡ ಭೂಸ್ವಾಧೀನ ಗೊಂಡಿದ್ದು,

ಪ್ರಸ್ತುತ ಹತ್ತಿರದಲ್ಲಿರುವ ಹಳೆ ಸರಕಾರಿ ಶಾಲಾ ಕಟ್ಟಡದಲ್ಲಿ ಅಂಗನವಾಡಿ ಕೇಂದ್ರ ನಡೆಯುತ್ತಿದೆ.

ಈಗಾಗಲೇ ಹೊಸ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಫುಲ್ಕೇರಿ ಫ್ರೆಂಡ್ಸ್ ಕ್ಲಬ್ ಕಟ್ಟಡದ ಪಕ್ಕದಲ್ಲಿಯೇ ಹೊಸ ಸರಕಾರಿ ನಿವೇಶನ ಮಂಜೂರಾಗಿದ್ದು ಆದಷ್ಟು ಶೀಘ್ರ ಇಲಾಖೆಯ ವತಿಯಿಂದ ಹೊಸ ಅಂಗನವಾಡಿ ಕಟ್ಟಡ ನಿರ್ಮಾಣ ಕಾರ್ಯ ಪ್ರಾರಂಭವಾಗಲಿದೆ ಎಂದು ಮಾಹಿತಿ ನೀಡಿದರು.

ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಯಶೋಧಾ ಶೆಟ್ಟಿ, ಪಂಚಾಯತ್ ಸದಸ್ಯರಾದ ಶ್ರೀ ವಸಂತ ಬಾಲ ವಿಕಾಸ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಪ್ರಿಯ , ಪ್ರಾಥಮಿಕ ಆರೋಗ್ಯ ಇಲಾಖೆ ಇರ್ವತ್ತೂರು ಇಲ್ಲಿಯ ಆರೋಗ್ಯ ಸಹಾಯಕಿ ಸಂಗೀತ ಸಿಎಚ್ಒ ಕುಮಾರಿ ಸಂಧ್ಯಾ, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ಅಂಗನವಾಡಿ ಶಿಕ್ಷಕಿ ಸಾಕಮ್ಮ ಕಾರ್ಯಕ್ರಮವನ್ನು ನಿರೂಪಿಸಿದರು.

ಅಂಗನವಾಡಿಯ ಪುಟಾಣಿ ಮಕ್ಕಳಿಂದ ವೈವಿಧ್ಯಮಯ ನೃತ್ಯ ಪ್ರದರ್ಶನ, ಕಾರ್ತಿಕ ಮಾಸದ ದೀಪೋತ್ಸವದ ಪ್ರಯುಕ್ತ ಮಣ್ಣಿನ ಹಣತೆಗಳನ್ನು ಬೆಳಗಿ ಶಿಶು ಗೀತೆಗಳನ್ನು ಸಾಮೂಹಿಕವಾಗಿ ಹಾಡಲಾಯಿತು.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.