



ಕಾರ್ಕಳ : ಬಾಗಲಕೋಟೆಯ ಶ್ರೀ ಕಣವಿ ವೀರಭದ್ರೇಶ್ವರ ಸಾಂಸ್ಕೃತಿಕ ಭವನದಲ್ಲಿ ಜರುಗಿದ ಕರ್ನಾಟಕ ರಾಜ್ಯ ಸಹಕಾರ ಭಾರತಿಯ ರಾಜ್ಯ ಕಾರ್ಯಕಾರಣಿ ಸಭೆಯಲ್ಲಿ ರಾಜ್ಯ ಸಹಕಾರ ಭಾರತಿಯ ಅಧ್ಯಕ್ಷರಾದ ಶ್ರೀ ರಾಜಶೇಖರ ಶೀಲವಂತ ರವರು ಈ ಆಯ್ಕೆಯನ್ನು ಘೋಷಿಸಿದರು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಅಖಿಲ ಭಾರತೀಯ ವ್ಯವಸ್ಥ ಪ್ರಮುಖ್ ರಾದ ಶ್ರೀ ಮಂಗೇಶ್ ಜಿ ಬೇಂಡೆ, ಕರ್ನಾಟಕ ರಾಜ್ಯ ಸಹಕಾರ ಭಾರತೀಯ ಪ್ರಧಾನ ಕಾರ್ಯದರ್ಶಿ ಶ್ರೀ ಮೋಹನದಾಸ ನಾಯಕ ರವರು ಉಪಸ್ಥಿತರಿದ್ದರು. ಸಾಣೂರು ನರಸಿಂಹ ಕಾಮತ್ ರವರು ಕಳೆದ ಎರಡು ದಶಕಗಳಿಂದ ಸಹಕಾರ ಭಾರತಿಯಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡಿದ್ದಾರೆ.
ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಸಾಣೂರು ಗ್ರಾಮ ಪಂಚಾಯತಿನ ಎರಡು ಅವಧಿಗೆ ಅಧ್ಯಕ್ಷರಾಗಿ, ಸಾಣೂರು ಗ್ರಾಮದ ಸರ್ವಾಂಗೀಣ ಅಭಿವೃದ್ಧಿಗೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಿದ್ದ ಇವರಿಗೆ ಸ್ಥಳೀಯ ಆಡಳಿತದಲ್ಲಿ ನಾವಿನ್ಯತೆ ಗಾಗಿ "ಗೂಗಲ್ ಅಂತರಾಷ್ಟ್ರೀಯ ಗ್ರಾಮ ಪಂಚಾಯತ್ ಪುರಸ್ಕಾರ" ದೊರೆತಿರುತ್ತದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಕ್ಷೇತ್ರದಲ್ಲಿ ನಿರಂತರ ಅಧ್ಯಯನಶೀಲತೆ ಮತ್ತು ಕ್ರಿಯಾಶೀಲರಾಗಿರುವ ಇವರು ಪ್ರಸ್ತುತ ಕರ್ನಾಟಕ ಪಂಚಾಯತರಾಜ್ ಪರಿಷತ್ (ರಿ.), ಬೆಂಗಳೂರು .ಇದರ ಆಡಳಿತ ಮಂಡಳಿ ಸದಸ್ಯರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಕಳೆದೆರಡು ವರ್ಷಗಳಲ್ಲಿ ಉಡುಪಿ ಜಿಲ್ಲಾ ಸಹಕಾರ ಭಾರತಿಯ ಹಾಲು ಪ್ರಕೋಷ್ಠದ ಜಿಲ್ಲಾ ಸಂಚಾಲಕರಾಗಿ ಜಿಲ್ಲೆಯ ಏಳು ತಾಲ್ಲೂಕುಗಳಲ್ಲಿ ಯೂ ಹಾಲು ಪ್ರಕೋಷ್ಠದ ಸಂಘಟನಾತ್ಮಕ ಚಟುವಟಿಕೆಗಳನ್ನು ವಿಸ್ತರಿಸಿದ್ದರು. ಇದೀಗ ಸಹಕಾರಿ ರಂಗದಲ್ಲಿ ಅವರಿಗಿರುವ ಆಸಕ್ತಿ ,ಅನುಭವ ಮತ್ತು ಸಕ್ರಿಯತೆಯನ್ನು ಪರಿಗಣಿಸಿ ಸಹಕಾರ ಭಾರತಿ ಕರ್ನಾಟಕ ರಾಜ್ಯ ಮಟ್ಟದ ಹಾಲು ಪ್ರಕೋಷ್ಠದ ಸಂಚಾಲಕರನ್ನಾಗಿ ನಿಯುಕ್ತಿಗೊಳಿಸಲಾಗಿದೆ.
ಪ್ರಸ್ತುತ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ, ಭಾರತಿ ಟೂರಿಸಂ ಡೆವಲಪ್ಮೆಂಟ್ ಆಪರೇಟಿವ್ ಲಿಮಿಟೆಡ್, ಮಂಗಳೂರು., ಪರಂಪರಾ ವಿವಿಧೋದ್ದೇಶ ಸಹಕಾರಿ ಸಂಘ ಕಾರ್ಕಳ ಸಂಸ್ಥೆಗಳಲ್ಲಿ ನಿರ್ದೇಶಕರಾಗಿ ಹಾಗೂ ಸಾಣೂರು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಸಹಕಾರಿ ಕ್ಷೇತ್ರದಲ್ಲಿ ಸಕ್ರಿಯರಾಗಿ ತಮ್ಮನ್ನು ತೊಡಗಿಸಿಕೊಂಡಿರುತ್ತಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.