



ಅಬುಧಾಬಿ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2021ರ ಆವೃತ್ತಿ ಕೊನೇ ಕ್ಷಣದತ್ತ ಬರುತ್ತಿದೆ. ಅಕ್ಟೋಬರ್ 15ರಂದು ಫೈನಲ್‌ನೊಂದಿಗೆ ಐಪಿಎಲ್ 14ನೇ ಆವೃತ್ತಿ ಕೊನೆಗೊಳ್ಳಲಿದೆ. ಐಪಿಎಲ್ ಮುಗಿದು ಎರಡೇ ದಿನದಲ್ಲಿ ಅಂದರೆ ಅಕ್ಟೋಬರ್ 17ರಿಂದ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಮತ್ತು ಓಮನ್‌ನಲ್ಲಿ ಟಿ20 ವಿಶ್ವಕಪ್ ಶುರುವಾಗಲಿದೆ. ಅಕ್ಟೋಬರ್ 18ರಂದು ಭಾರತ ತಂಡ ಇಂಗ್ಲೆಂಡ್ ವಿರುದ್ಧ ಮೊದಲ ಅಭ್ಯಾಸ ಪಂದ್ಯ ಆಡಲಿದೆ. ಅಕ್ಟೋಬರ್ 20ರಂದು ಮತ್ತೆ ಭಾರತ ಮತ್ತು ಆಸ್ಟ್ರೇಲಿಯಾ ಮಧ್ಯೆ ಅಭ್ಯಾಸ ಪಂದ್ಯಗಳು ನಡೆಯಲಿವೆ. ಟೂರ್ನಿಯ ಆರಂಭಿಕ ಪಂದ್ಯವಾಗಿ ಭಾರತ ತಂಡ ಪಾಕಿಸ್ತಾನದ ಸವಾಲು ಸ್ವೀಕರಿಸಲಿದೆ. ಅಕ್ಟೋಬರ್ 24ಕ್ಕೆ ಈ ಪಂದ್ಯ ದುಬೈನಲ್ಲಿ ನಡೆಯಲಿದೆ. ಅಭ್ಯಾಸ ಪಂದ್ಯಗಳ ವೇಳಾಪಟ್ಟಿ:
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.