



ನವದೆಹಲಿ: ಈಶಾನ್ಯ ರಾಜ್ಯ ಮೇಘಾಲಯದಲ್ಲಿ ಮತ್ತೆ ಭೂಮಿ ಕಂಪಿಸಿದೆ. ಐದು ಗಂಟೆಗಳ ಅವಧಿಯಲ್ಲಿ ಎರಡನೆ ಬಾರಿ ಭೂಮಿ ಕಂಪಿಸಿದೆ. ರಿಕ್ಟರ್ ಮಾಪಕದಲ್ಲಿ ಭೂಕಂಪನದ ತೀವ್ರತೆ3.7ರಷ್ಟು ದಾಖಲಾಗಿದೆ.
ಮುಂಜಾನೆ 6.57ಕ್ಕೆ ಭೂಕಂಪನ ಸಂಭವಿಸಿದೆ ಎಂದು ಭೂಗರ್ಭ ಶಾಸ್ತ್ರ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಮೇಘಾಲಯದ ತುರಾದಿಂದ 59 ಕಿಲೋ ಮೀಟರ್ ದೂರದಲ್ಲಿ ಇರುವ ಪ್ರದೇಶದಲ್ಲಿ ಭೂ ಕಂಪನ ಸಂಭವಿಸಿದೆ. ತ್ರಿಪುರಾದಲ್ಲಿ ಕೂಡ ಇಂದು ಭೂಕಂಪನ ಸಂಭವಿಸಿದ್ದು, ಜನರು ಭಯ ಭೀತರಾಗಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.