



ಬೆಂಗಳೂರು: ಮಾರ್ಚ್ 9 ರಿಂದ ಆರಂಭಗೊಳ್ಳುವ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಿಜಾಬ್ ಧರಿಸಿ ಹಾಜರಾಗಲು ಅನುಮತಿ ಕೋರಿ ಬರುವ ಅರ್ಜಿಗಳನ್ನು ತಿರಸ್ಕರಿಸುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸೂಚನೆ ನೀಡಿದೆ.
2022ರ ಸಾಲಿನಲ್ಲಿಯೂ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಿಜಾಬ್ ಧರಿಸಿ ಬರಲು ಅವಕಾಶ ನೀಡಿರಲಿಲ್ಲ. ಇದೀಗ ಶಾಲಾ, ಕಾಲೇಜುಗಳ ಸಮವಸ್ತ್ರ ನಿಯಮದಲ್ಲಿ ಹಿಜಾಬ್‌ಗ ವಿನಾಯಿತಿ ನೀಡಬಹುದೇ, ಇಲ್ಲವೇ ಎಂಬುದರ ಬಗ್ಗೆ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದೆ. ಹಾಗೆಯೇ ಹಿಜಾಬ್ ಧರಿಸಿ ಪರೀಕ್ಷೆಗೆ ಹಾಜರಾಗಲು ಅನುಮತಿ ಕೋರಿ ಕೆಲ ವಿದ್ಯಾರ್ಥಿನಿಯರು ಸುಪ್ರೀಂ ಕೋರ್ಟ್ ಕದ ತಟ್ಟಿದ್ದಾರೆ. ಆದರೆ ಸುಪ್ರೀಂ ಕೋರ್ಟ್ ಇನ್ನೂ ಈ ಬಗ್ಗೆ ಅದೇಶ ನೀಡಿಲ್ಲ. ಆದ್ದರಿಂದ 2022ರಂತೆಯೇ ಈ ಬಾರಿ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡದಿರಲು ಸರ್ಕಾರ ತೀರ್ಮಾನಿಸಿದೆ. ಹಿಜಾಬ್ ವಿವಾದ ಸುಪ್ರೀಂ ಕೋರ್ಟ್‌ನಲ್ಲಿದೆ. ಸುಪ್ರೀಂ ಕೋರ್ಟ್ ಯಾವುದೇ ಆದೇಶ ನೀಡಿಲ್ಲ. ಆದ್ದರಿಂದ ಪರೀಕ್ಷೆಗೆ ಹಿಜಾಬ್ ಧರಿಸಿ ಬರುವವರಿಗೆ ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಬಿ. ಸಿ. ನಾಗೇಶ್ ಹೇಳಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.