logo
WhatsApp Image 2026-04-02 at 14.46.04.jpeg
hindalco everlast.jpeg

ಆಗಸ್ಟ್‌-ಸೆಪ್ಟಂಬರ್‌ನಲ್ಲಿ ನಡೆಸಲಾಗಿದ್ದ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ,ಶೇ.29.91 ಫಲಿತಾಂಶ

ಟ್ರೆಂಡಿಂಗ್
share whatsappshare facebookshare telegram
20 Sept 2021
post image

ಬೆಂಗಳೂರು: ಜಿಲ್ಲಾವಾರು ಫಲಿತಾಂಶದಲ್ಲಿ ಬೆಂಗಳೂರು ಉತ್ತರ ಪ್ರಥಮ ಸ್ಥಾನ ಪಡೆದುಕೊಂಡಿದೆ. ಬೆಂಗಳೂರು ದಕ್ಷಿಣ ದ್ವಿತೀಯ ಸ್ಥಾನದಲ್ಲಿದ್ದರೆ, ಬೆಂಗಳೂರು ಗ್ರಾಮಾಂತರ ತೃತೀಯ ಹಾಗು ಕೊನೆಯ ಸ್ಥಾನ ಕೊಡಗು ಪಡೆದಿದೆ.

580 ವಿದ್ಯಾರ್ಥಿಗಳು ಡಿಸ್ಟಿಕ್ಷನ್ ಅಂಕ ಶೇ.85 ಕ್ಕಿಂತ ಅಧಿಕ ಪಡೆದುಕೊಂಡಿದ್ದಾರೆ. ಪ್ರಥಮ ದರ್ಜೆಯಲ್ಲಿ 1.939 ವಿದ್ಯಾರ್ಥಿಗಳು ಪಾಸ್ ಆಗಿದ್ದರೆ. ಸೆಕೆಂಡ್ ಕ್ಲಾಸ್ನಲ್ಲಿ 1578 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಇನ್ನು ತೃತೀಯ ಸ್ಥಾನವವನ್ನು 1410 ವಿದ್ಯಾರ್ಥಿಗಳು ಪಡೆದಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಶೇ 70.83, ವಾಣಿಜ್ಯ ಶೇ. 29.98, ಕಲಾ ವಿಭಾಗದಲ್ಲಿ ಶೇ. 39.06 ರಷ್ಟು ಫಲಿತಾಂಶ ಬಂದಿದೆ. ಈ ಬಾರಿಯೂ ಬಾಲಕೀಯರೇ ಮೇಲು ಗೈ ಸಾಧಿಸಿದ್ದು ‌ ಶೇ.36.72 ರಷ್ಟು ಫಲಿತಾಂಶ ನೀಡಿದ್ದಾರೆ. ಬಾಲಕರು 26.06 ರಷ್ಟು ಮಂದಿ ಪಾಸ್ ಆಗಿದ್ದಾರೆ.ವಿಜ್ಞಾನ ವಿಭಾಗದಲ್ಲಿ 600- 573 ಅಂಕ ಪಡೆಯಲಾಗಿದೆ. ವಾಣಿಜ್ಯ ವಿಭಾಗದಲ್ಲಿ 600- 594 ಅತಿ ಹೆಚ್ಚು ಅಂಕ ಪಡೆಯಲಾಗಿದೆ. ಇನ್ನು ಕಲಾ ವಿಭಾಗದಲ್ಲಿ 600 -592 ಅತೀ ಹೆಚ್ಚಿನ ಅಂಕವಾಗಿದೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಅವರು ವಿಧಾನಸೌಧದ ತಮ್ಮ ಕಚೇರಿಯಲ್ಲಿ ಫಲಿತಾಂಶ ಪ್ರಕಟಿಸಿದ್ದಾರೆ. ವಿದ್ಯಾರ್ಥಿಗಳು kea.kar.nic.in ವೆಬ್‌ಸೈಟ್‌ನಲ್ಲಿ ತಮ್ಮ ಫಲಿತಾಂಶ ವೀಕ್ಷಿಸಬಹುದು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.