



ಬೆಂಗಳೂರು: ಮೇ 16ರಿಂದ ಶಾಲೆಗಳು ಆರಂಭ ವಾಗಲಿದ್ದು, ಮೇ16ರಿಂದ 20ರವರೆಗೆ ದಾಖಲಾತಿ ಪ್ರಕ್ರಿಯೆ ನಡೆಯಲಿದೆ. ಮೇ 17ರಿಂದ 31ವರೆಗೆ ಕಲಿಕಾ ಚೇತರಿಕೆ ಕಾರ್ಯಕ್ರಮ ಆರಂಭವಾಲಿದೆ. ಮೇ 28 ಪೋಷಕರ ಸಭೆ, ಜೂನ್ 1ರಿಂದ ಪ್ರಸಕ್ತ ಸಾಲಿನ ಪಠ್ಯ ಬೋಧನೆಗೆ ಚಾಲನೆ ದೊರೆಯಲಿದೆ.
ಅಕ್ಟೋಬರ್ 3ರಿಂದ 16 ದಸರಾ ರಜೆ, ಅಕ್ಟೋಬರ್ 17ರಿಂದ 25 ಅರ್ಧ ವಾರ್ಷಿಕ ಪರೀಕ್ಷೆ ಫೆ.23-2023ರಿಂದ 25ರವರೆಗೆ ಪೂರ್ವ ಸಿದ್ಧತಾ ಪರೀಕ್ಷೆ, ಮಾರ್ಚ್ 23-2023ರಿಂದ 31ವರೆಗೆ ವಾರ್ಷಿಕ ಪರೀಕ್ಷೆಗಳು ನಡೆಯಲಿದೆ. ವಿಶ್ವೇಶ್ವರಯ್ಯ ದಿನಾಚರಣೆ, ಮಹಾತ್ಮಾ ಗಾಂಧಿ, ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ, ಕನಕದಾಸರ ಜಯಂತಿ, ಸಂವಿಧಾನ ದಿನಾಚರಣೆ, ವಿವೇಕಾನಂದ ಜಯಂತಿ ದಾರ್ಶನಿಕರ ಜಯಂತಿ ಆಚರಣೆಗೆ ಸೂಚನೆ ನೀಡಲಾಗಿದೆ ಎಂದು ಸರಕಾರ ತಿಳಿಸಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.