logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಕೇರಳದಲ್ಲಿ ಕಾಣಿಸಿಕೊಂಡ ಟೊಮೆಟೊ ಜ್ವರದ ಲಕ್ಷಣಗಳೇನು ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಟ್ರೆಂಡಿಂಗ್
share whatsappshare facebookshare telegram
12 May 2022
post image

ಕೇರಳದಲ್ಲಿ ಟೊಮೆಟೊ ಜ್ವರ ಹೊಸ ವೈರಸ್ ಸಂಚಲನ ಮೂಡಿಸುತ್ತಿದೆ. ಈ ವೈರಸ್ ವಿಶೇಷವಾಗಿ ಚಿಕ್ಕ ಮಕ್ಕಳಲ್ಲಿ ಹೆಚ್ಚಾಗಿ ಕಾಣಿಸಿಕೊಂಡಿದ್ದು, ಪೋಷಕರಲ್ಲಿ ಕಳವಳ ಸೃಷ್ಟಿಸಿದೆ. ಕೇರಳದಾದ್ಯಂತ ಇದುವರೆಗೆ ಸುಮಾರು 80 ಮಕ್ಕಳು ವೈರಸ್ ಸೋಂಕಿಗೆ ಒಳಗಾಗಿದ್ದಾರೆ. ಇದೀಗ ಈ ವೈರಸ್‌ ತಮಿಳುನಾಡಿನಲ್ಲೂ ವಕ್ಕರಿಸಿದ್ದು ಆತಂಕ ಸೃಷ್ಟಿ ಮಾಡಿದೆ.

ಎರಡು ರಾಜ್ಯಗಳ ಗಡಿಭಾಗದ ಗ್ರಾಮಗಳಲ್ಲಿ ಅಧಿಕಾರಿಗಳು ತಪಾಸಣೆ ನಡೆಸುತ್ತಿದ್ದಾರೆ. ಕೊಯಮತ್ತೂರಿನಲ್ಲಿ ರಾಜ್ಯಕ್ಕೆ ಪ್ರವೇಶಿಸುವವರಿಗೆ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಜ್ವರದ ಲಕ್ಷಣ ಇರುವವರನ್ನು ಗುರುತಿಸಲು ತಮಿಳುನಾಡು-ಕೇರಳ ಗಡಿಯಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ. ಕೇರಳದ ವೈದ್ಯಕೀಯ ಅಧಿಕಾರಿಗಳ ಪ್ರಕಾರ, ಟೊಮೆಟೊ ಜ್ವರ ಸೋಂಕಿತ ಮಕ್ಕಳು ದದ್ದು, ಪೃಷ್ಠದ ಮೇಲೆ ತುರಿಕೆ ಮತ್ತು ನಿರ್ಜಲೀಕರಣದಂತಹ ರೋಗಲಕ್ಷಣಗಳಿಂದ ನೋವನ್ನನುಭವಿಸುತ್ತಿದ್ದಾರೆ.

ಇದು ಜ್ವರ ವೈರಲ್ ಜ್ವರ, ಚಿಕನ್ ಗುನ್ಯಾ ಅಥವಾ ಡೆಂಗ್ಯೂ ಜ್ವರಕ್ಕೆ ಸಂಬಂಧಿಸಿದ್ದಾ ಎಂದು ಕೇರಳದಲ್ಲಿ ಸಂಶೋಧನೆ ನಡೆಯುತ್ತಿದೆ. ಮಕ್ಕಳ ದೇಹವು ಕೆಂಪು ಬಣ್ಣಕ್ಕೆ ತಿರುಗಿ ಮೈಮೇಲೆ ಸಣ್ಣ ಗಾತ್ರದ ಕೆಂಪು ಗುಳ್ಳೆಗಳು ಉಂಟಾಗುವುದರಿಂದ ಇದಕ್ಕೆ ಟೊಮೆಟೊ ಜ್ವರ ಎಂಬ ಹೆಸರು ಬಂದಿದೆ ಎಂದು ಹೇಳಲಾಗುತ್ತಿದೆ.ಹಲವು ವರ್ಷಗಳಿಂದ ದೇಶದಾದ್ಯಂತ ಆಗಾಗ್ಗೆ ಬಾಧಿಸುತ್ತಿರುವ 'ಚಿಕೂನ್‌ಗುನ್ಯಾ' ರೀತಿಯ ಕೆಲವು ಲಕ್ಷಣಗಳು ಟೊಮೆಟೊ ಜ್ವರದಲ್ಲೂ ಕಾಣಿಸಿಕೊಂಡಿದೆ. ತೀವ್ರ ಜ್ವರ, ಇಡೀ ದೇಹದಲ್ಲಿ ನೋವು, ಕೀಲುಗಳಲ್ಲಿ ಊತ, ಅತಿಯಾದ ಆಯಾಸದಂತಹ ಲಕ್ಷಣಗಳನ್ನು ಗಮನಿಸಲಾಗಿದೆ.

ಸೋಂಕಿಗೆ ಒಳಗಾಗಿರುವ ಮಕ್ಕಳ ಚರ್ಮದ ಮೇಲೆ ಗುಳ್ಳೆಗಳು ಎದ್ದಿರುವುದು, ಕೆರೆತ ಉಂಟಾಗಿದೆ. ಇದರೊಂದಿಗೆ ಕೆಮ್ಮು, ನೆಗಡಿ, ಹೊಟ್ಟೆ ನೋವು, ವಾಂತಿ ಅಥವಾ ಬೇಧಿ, ಹೊಟ್ಟೆ ತೊಳಸುವಿಕೆ, ಕೈಗಳು, ಮಂಡಿಗಳಲ್ಲಿ ಬಣ್ಣ ಬದಲಾವಣೆ ಉಂಟಾಗುವ ಲಕ್ಷಣಗಳು ಕಾಣಿಸಿಕೊಳ್ಳಬಹುದಾಗಿದೆ.ಸೋಂಕು ತಡೆಗಟ್ಟಲು ಶುಚಿತ್ವ ಮತ್ತು ಸ್ವಚ್ಚತೆ ಕಾಯ್ದುಕೊಳ್ಳುವುದು ಬಹು ಮುಖ್ಯವಾಗುತ್ತದೆ. ದೇಹಕ್ಕೆ ಅಗತ್ಯ ನೀರಿನ ಅಂಶ ಸೇರುವಂತೆ ಮಾಡಿಕೊಳ್ಳುವಂತೆ ತಜ್ಞರು ಸಲಹೆ ನೀಡಿದ್ದಾರೆ. ಸೋಂಕಿನ ಯಾವುದೇ ಲಕ್ಷಣಗಳು ಕಂಡು ಬಂದ ಕೂಡಲೇ ಮಕ್ಕಳ ಪಾಲಕರು ವೈದ್ಯರನ್ನು ಸಂಪರ್ಕಿಸುವುದು ಒಳ್ಳೆಯದು. ಸೋಂಕಿಗೆ ಒಳಗಾಗಿರುವ ಮಕ್ಕಳಿಗೆ ತುರಿಕೆಯ ಲಕ್ಷಣಗಳು ಹಾಗೂ ಗುಳ್ಳೆಗಳು ಕಾಣಿಸಿಕೊಂಡರೆ, ಕೆರೆದುಕೊಳ್ಳುವುದನ್ನು ತಪ್ಪಿಸಬೇಕಾಗುತ್ತದೆ. ಇಲ್ಲವಾದರೆ, ಇನ್ನಷ್ಟು ತುರಿಕೆ ಹೆಚ್ಚಾಗಿ ವಿಪರೀತಕ್ಕೆ ಹೋಗುವ ಸಾಧ್ಯತೆ ಇರುತ್ತದೆ.

ಸೋಂಕಿತ ವ್ಯಕ್ತಿಯೊಂದಿಗೆ ಅಂತರ ಕಾಯ್ದುಕೊಳ್ಳುವ ಮೂಲಕ ಸೋಂಕು ಹರಡುವುದನ್ನು ತಡೆಯಬಹುದಾಗಿದೆ. ಸೋಂಕು ಬಹುಬೇಗ ಹರಡುವುದರಿಂದ ಸೋಂಕಿತರನ್ನು ಪ್ರತ್ಯೇಕವಾಗಿರಿಸಿ ಚಿಕಿತ್ಸೆ ಕೊಡುವುದನ್ನು ಅನುಸರಿಸಲಾಗುತ್ತಿದೆ. ಜ್ವರದಿಂದಾಗುವ ಬಳಲಿಕೆಯ ಪರಿಣಾಮಗಳಿಂದ ಹೊರಬರಲು ರೋಗಿಗಳು ಅಗತ್ಯ ವಿಶ್ರಾಂತಿ ತೆಗೆದುಕೊಳ್ಳಬೇಕಾಗುತ್ತದೆ

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.