



ಚಾರ್ ಧಾಮ್ ಯಾತ್ರೆ ಆರಂಭವಾಗಿ ಎರಡು ವಾರದಲ್ಲೇ ಸುಮಾರು 39 ಯಾತ್ರಾರ್ಥಿಗಳು ಸಾವನ್ನಪ್ಪಿರುವುದಾಗಿ ಉತ್ತರಾಖಂಡ್ ಸರ್ಕಾರ ತಿಳಿಸಿದೆ. ಜೊತೆಗೆ ಆರೋಗ್ಯ ಸಮಸ್ಯೆ ಇರುವವರು ಯಾತ್ರೆ ಕೈಗೊಳ್ಳದಂತೆ ಮನವಿ ಮಾಡಿದೆ.
ಚಾರ್‌ಧಾಮ್ ಗಮ್ಯಸ್ಥಾನ ಯಮುನೋತ್ರಿ, ಗಂಗೋತ್ರಿ, ಬದರಿನಾಥ್ ಮತ್ತು ಕೇದಾರನಾಥಗಳನ್ನು ಒಳಗೊಂಡಿದೆ. ಶ್ರೀ ಆದಿ ಶಂಕರಾಚಾರ್ಯರು ಸುಮಾರು 1200 ವರ್ಷಗಳ ಹಿಂದೆ ಚಾರ್ ಧಾಮ್ ಯಾತ್ರೆಯನ್ನು ಕೈಗೊಂಡರು.
ಮೇ 3ರಿಂದ ಚಾರ್ ಧಾಮ್ ಯಾತ್ರೆ ಆರಂಭವಾಗಿದೆ. ಯಾತ್ರೆಯ ಪ್ರಾರಂಭದಿಂದ ಇಲ್ಲಿವರೆಗೂ 39 ಜನರು ಸಾವನ್ನಪ್ಪಿರುವುದಾಗಿ ಉತ್ತರಾಖಂಡ ಆರೋಗ್ಯ ಇಲಾಖೆಯ ಡಿಜಿ ಡಾ.ಕೆ.ಎಸ್. ಶೈಲಜಾಭಟ್ ಕಳವಳ ವ್ಯಕ್ತಪಡಿಸಿದರು. ಅಧಿಕ ರಕ್ತದೊತ್ತಡ ಮತ್ತು ಹೃದಯ ಸಮಸ್ಯೆ, ಆಯಾಸ, ಬೆಟ್ಟ ಹತ್ತುವುದು ಮತ್ತಿತರ ಕಾರಣಗಳಿಂದಾಗಿ ಯಾತ್ರಾರ್ಥಿಗಳು ಸಾವನ್ನಪ್ಪಿದ್ದಾರೆ. ವೈದ್ಯಕೀಯ ತೊಂದರೆ ಎದುರಿಸುತ್ತಿರುವ ಪ್ರಯಾಣಿಕರು ಚಾರ್ ಧಾಮ್‌ಗೆ ತೆರಳದಂತೆ ಡಾ.ಶೈಲಜಾ ಭಟ್ ಭಕ್ತಾದಿಗಳಲ್ಲಿ ಮನವಿ ಮಾಡಿದ್ದಾರೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.