



ಉಡುಪಿ:
ಹಿಂದೂ ಪದ ಅಶ್ಲೀಲ ಎಂದು ಸತೀಶ್ ಜಾರಕಿಹೊಳಿ ಹೇಳಿರೋದು ನಾಚಿಕೆಗೇಡು ಸಂಗತಿ. ಕಾಂಗ್ರೆಸ್ ನ ಕಾರ್ಯಾಧ್ಯಕ್ಷನಾಗಿ ಜಾರಕಿಹೋಳಿ ಹೇಳಿಕೆ ಕೊಟ್ಟಿದ್ದಾರೆ. ಈ ಅಪಮಾನ ಸಹಿಸಿಕೊಳ್ಳಲು ಸಾಧ್ಯವಿಲ್ಲ. ಇದರ ವಿರುದ್ಧ ಸ್ವಾಭಿಮಾನಿ ಹಿಂದು ಅಭಿಮಾನನ್ನು ಇಂದಿನಿಂದ ಆರಂಭಿಸುತ್ತೇವೆ. ಜಾರಕಿಹೊಳಿ ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತೇವೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಹೇಳಿದರು. ಉಡುಪಿಯಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಾರಕಿಹೊಳಿ ಹೇಳಿಕೆಗೆ ಕಾಂಗ್ರೆಸ್ ಕ್ಷಮೆ ಯಾಚಿಸಲೇಬೇಕು. ಕಾಂಗ್ರೆಸ್ ಹುಟ್ಟಿನಿಂದ ಇವತ್ತಿನವರೆಗೆ ಹಿಂದುತ್ವ, ಭಾರತೀಯತೆ ಮೇಲೆ ಹಲವು ಬಾರಿ ಅವಮಾನ ಮಾಡಿದೆ. ನೆಹರು ನನ್ನನ್ನು ಹಿಂದೂ ಎಂದು ಕರೆಯಬೇಡಿ ಎಂದು ಹೇಳಿದ್ದರು. ನೆಹರು ಹಾಕಿಕೊಟ್ಟ ಪರಂಪರೆ ಇವತ್ತಿಗೂ ಮುಂದುವರೆಯುತ್ತಾ ಬಂದಿದೆ ಎಂದು ಕಿಡಿಕಾರಿದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.