


ಬೆಂಗಳೂರು:** ರಾಜ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸದ ವೇಳೆ ಸೆಲ್ಫೀ ಹಾಗೂ ರೀಲ್ಸ್ ಚಿತ್ರೀಕರಣಕ್ಕೆ ಅವಕಾಶ ನೀಡದಂತೆ ಕಾಲೇಜು ಶಿಕ್ಷಣ ಇಲಾಖೆ ಸೂಚನೆ ನೀಡಿದೆ.
ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಶೈಕ್ಷಣಿಕ ಪ್ರವಾಸಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿರುವ ಇಲಾಖೆ, ಪ್ರವಾಸದ ವೇಳೆ ಕಟ್ಟುನಿಟ್ಟಾಗಿ ಪಾಲಿಸಬೇಕಾದ ಹಲವು ನಿಯಮಗಳನ್ನು ಪ್ರಕಟಿಸಿದೆ. ಪ್ರವಾಸದ ಸಂದರ್ಭದಲ್ಲಿ ಸಂಭವಿಸುತ್ತಿರುವ ಅವಘಡಗಳು ಹಾಗೂ ರೀಲ್ಸ್‌ಗಾಗಿ ಅಪಾಯಕಾರಿ ಸ್ಥಳಗಳಲ್ಲಿ ಚಿತ್ರೀಕರಣ ಮಾಡುವುದನ್ನು ತಡೆಯುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ.
ಪ್ರವಾಸಕ್ಕೆ ತೆರಳುವ ಮುನ್ನವೇ ವಿದ್ಯಾರ್ಥಿಗಳಿಗೆ ಸೆಲ್ಫೀ, ರೀಲ್ಸ್ ಚಿತ್ರೀಕರಣಕ್ಕೆ ಅವಕಾಶವಿಲ್ಲ ಎಂಬುದನ್ನು ಪ್ರಾಂಶುಪಾಲರು ಸ್ಪಷ್ಟವಾಗಿ ತಿಳಿಸಬೇಕು. ಪ್ರವಾಸದ ವೇಳೆಯೂ ಈ ನಿಯಮ ಪಾಲನೆಯಾಗುತ್ತಿದೆಯೇ ಎಂಬುದನ್ನು ಕಾಲೇಜು ಆಡಳಿತ ನಿಗಾ ವಹಿಸಬೇಕು ಎಂದು ಸೂಚಿಸಲಾಗಿದೆ.
ಇಲಾಖೆಯ ಅನುಮತಿ ಪಡೆಯದೇ ಶೈಕ್ಷಣಿಕ ಪ್ರವಾಸ ಆಯೋಜಿಸುವಂತಿಲ್ಲ. ಪ್ರವಾಸಕ್ಕೂ ಮುನ್ನ ವಿದ್ಯಾರ್ಥಿಗಳಿಂದ ಮುಚ್ಚಳಿಕೆ ಪತ್ರ ಪಡೆದು, ಪೋಷಕರ ಸಹಿ ಮಾಡಿಸಿ ಇಲಾಖೆಗೆ ಸಲ್ಲಿಸಬೇಕು. ಅನುಮತಿ ನೀಡಿರುವ ಸ್ಥಳಗಳನ್ನು ಹೊರತುಪಡಿಸಿ ಬೇರೆ ಸ್ಥಳಗಳಿಗೆ ವಿದ್ಯಾರ್ಥಿಗಳನ್ನು ಕರೆದೊಯ್ಯುವಂತಿಲ್ಲ ಎಂದು ತಿಳಿಸಲಾಗಿದೆ
ಪ್ರಮುಖ ಮಾರ್ಗಸೂಚಿಗಳು
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.