logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಹಿರಿಯ ನಿರ್ದೇಶಕ ಕೆವಿ ರಾಜು ಇನ್ನಿಲ್ಲ

ಟ್ರೆಂಡಿಂಗ್
share whatsappshare facebookshare telegram
24 Dec 2021
post image

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಕೆವಿ ರಾಜು ಇಂದು ಬೆಳಿಗ್ಗೆ ನಿಧನ ಹೊಂದಿದ್ದಾರೆ. ಅನಾರೋಗ್ಯದ ಕಾರಣ ಕೆಲವು ದಿನಗಳಿಂದ ಮನೆಯಲ್ಲಿಯೇ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ಇಂದು ರಾಜಾಜಿನಗರದ ನಿವಾಸದಲ್ಲಿ ಬೆಳಗ್ಗೆ 8 ಗಂಟೆಗೆ ಇಹಲೋಕ ತ್ಯಜಿಸಿದ್ದಾರೆ. ಕೆವಿ ರಾಜು ಅವರು ಚಿತ್ರರಂಗದಲ್ಲಿ ನಿರ್ದೇಶಕ, ಬರಹಗಾರ ಮತ್ತು ಚಿತ್ರಕಥೆಗಾರರಾಗಿ ಗುರುತಿಸಿಕೊಂಡಿದ್ದರು. ಖ್ಯಾತ ನಿರ್ದೇಶಕ ಕೆವಿ ಜಯರಾಮ್ ಅವರ ಸಹೋದರರಾಗಿದ್ದ ಕೆವಿ ರಾಜು, 1982 ರಲ್ಲಿ ‘ಬಾಡದ ಹೂ’ ಚಿತ್ರದಲ್ಲಿ ತಮ್ಮ ಸಹೋದರನಿಗೆ ಸಹಾಯಕ ನಿರ್ದೇಶಕರಾಗುವ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದ್ದರು. 1984 ರ ‘ಒಲವೇ ಬದುಕು’ ಮೂಲಕ ಅವರು ಬರಹಗಾರ ಹಾಗೂ ನಿರ್ದೇಶಕನಾಗಿ ಚಿತ್ರರಂಗದಲ್ಲಿ ಗುರುತಿಸಿಕೊಂಡರು. ಕೆಲವೇ ವರ್ಷಗಳಲ್ಲಿ ಚಿತ್ರರಂಗದ ಹಿಟ್ ನಿರ್ದೇಶಕರಾಗಿ ಅವರು ಜನಮೆಚ್ಚುಗೆ ಪಡೆದರು. ಸಂಗ್ರಾಮ (1987), ಬಂಧ ಮುಕ್ತ (1987), ಯುದ್ಧಕಾಂಡ (1989), ಬೆಳ್ಳಿ ಮೋಡಗಳು, ಬೆಳ್ಳಿ ಕಾಲುಂಗುರ, ಮುಂತಾದ ಚಿತ್ರಗಳ ಮೂಲಕ ಅವರು ಬ್ಲಾಕ್ ಬಸ್ಟರ್ ನಿರ್ದೇಶಕ ಎಂದು ಗುರುತಿಸಿಕೊಂಡಿದ್ದರು. 1991ರಲ್ಲಿ ‘ಇಂದ್ರಜಿತ್’ ಚಿತ್ರದ ಮೂಲಕ ಬಾಲಿವುಡ್​ಗೂ ಕೆವಿ ರಾಜು ಪ್ರವೇಶಿಸಿದ್ದರು. ಅಮಿತಾಭ್ ಬಚ್ಚನ್ ಹಾಗೂ ಜಯಪ್ರದಾ ಆ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ಇದಲ್ಲದೇ ಮತ್ತೆರಡು ಹಿಂದಿ ಚಿತ್ರಗಳಿಗೂ ಅವರು ಆಕ್ಷನ್ ಕಟ್ ಹೇಳಿದ್ದರು. ಕಾಲಾನಂತರದಲ್ಲಿ ರಾಜು ಅವರು ಸಂಭಾಷಣೆ ಹಾಗೂ ಬರಹಗಾರರಾಗಿ ಗುರುತಿಸಿಕೊಂಡರು. 2017ರಲ್ಲಿ ತೆರೆಗೆ ಬಂದ ಕನ್ನಡದ ‘ಟೈಗರ್ ಗಲ್ಲಿ’ ಚಿತ್ರಕ್ಕೆ ಅವರು ಚಿತ್ರಕತೆ ಹಾಗೂ ಸಂಭಾಷಣೆ ರಚಿಸಿದ್ದರು.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.