logo
WhatsApp Image 2026-04-02 at 14.46.04.jpeg
hindalco everlast.jpeg

ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ನಿಧನ

ಟ್ರೆಂಡಿಂಗ್
share whatsappshare facebookshare telegram
1 Mar 2024
post image

ಮಂಗಳೂರು, ಮಾ.01: ಉದಯವಾಣಿಯ ಹಿರಿಯ ಪತ್ರಕರ್ತರಾಗಿದ್ದ ಮನೋಹರ್ ಪ್ರಸಾದ್(63) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ‌ ಖಾಸಗಿ ಆಸ್ಪತ್ರೆಯಲ್ಲಿ ಹೃದಾಯಘಾತದಿಂದ ಇಂದು ನಿಧನ ಹೊಂದಿದ್ದಾರೆ.

ಮೂಲತಃ ಕಾರ್ಕಳ ತಾಲೂಕಿನ ಕರ್ವಾಲು ಗ್ರಾಮದವರಾದ ಮನೋಹರ ಪ್ರಸಾದ್ ಮಂಗಳೂರಿನಲ್ಲಿ ಕಾಲೇಜು ಪದವಿ ಶಿಕ್ಷಣ ಪೂರ್ತಿಗೊಳಿಸಿ “ನವ ಭಾರತ’ ಪತ್ರಿಕೆಯಲ್ಲಿ ಪತ್ರಿಕಾ ವೃತ್ತಿ ಜೀವನ ಆರಂಭಿಸಿದ್ದರು. ಬಳಿಕ “ಉದಯವಾಣಿ’ ಮಂಗಳೂರು ವರದಿಗಾರರಾಗಿ ಸೇರ್ಪಡೆಗೊಂಡಿದ್ದರು. ಅಲ್ಲಿಂದ ಮೊದಲ್ಗೊಂಡು ಮುಖ್ಯ ವರದಿಗಾರರಾಗಿ, ಬಳಿಕ ಬ್ಯೂರೋ ಚೀಫ್ ಆಗಿದ್ದ ಅವರು ಬಳಿಕ ಸಹಾಯಕ ಸಂಪಾದಕರಾಗಿದ್ದರು ಇದರೊಂದಿಗೆ ಉದಯವಾಣಿಯಲ್ಲಿ ಸತತ 36 ವರ್ಷಗಳ ಸೇವೆ ಸಲ್ಲಿಸಿದ್ದ ಅವರು ಕಳೆದ ಎರಡು ವರ್ಷದ ಹಿಂದೆ ನಿವೃತ್ತಿಗೊಂಡಿದ್ದರು.

ಕರ್ನಾಟಕ ರಾಜ್ಯೋತ್ಸವ ಸಹಿತ ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದ ಇವರು ಉತ್ತಮ ಕಾರ್ಯಕ್ರಮ ನಿರೂಪಕರಾಗಿಯೂ ಹೆಸರುಗಳಿಸಿದ್ದರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.