



ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಹಿರಿಯ ನಾಯಕ ಮದನ್ ದಾಸ್ ದೇವಿ (81) ಸೋಮವಾರ ಬೆಳಗ್ಗೆ ನಿಧನರಾದರು.
ಬೆಂಗಳೂರಿನ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದರು ಎಂದು ಆರ್‌ಎಸ್‌ಎಸ್ ನಾಯಕರೊಬ್ಬರು ತಿಳಿಸಿದ್ದಾರೆ. ಮಹಾರಾಷ್ಟ್ರ ಮೂಲದ ಮದನ್ ದಾಸ್ ಅನಾರೋಗ್ಯದಿಂದ ಬಳಲುತ್ತಿದ್ದು, ಚಿಕಿತ್ಸೆಗಾಗಿ ಬೆಂಗಳೂರಿನಲ್ಲಿ ನೆಲೆಸಿದ್ದರು.
ಮದನ್ ದೇವಿದಾಸ್ ಅವರ ಪಾರ್ಥಿವ ಶರೀರವನ್ನು ನಗರದ ಕೇಶವ ಕೃಪಾದಲ್ಲಿ ಮಧ್ಯಾಹ್ನ 1.30ರಿಂದ 4 ಗಂಟೆಯವರೆಗೆ ಅಂತಿಮದರ್ಶನಕ್ಕೆ ಇರಿಸಲಾಗುವುದು. ಮಂಗಳವಾರ ಪುಣೆಯಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ ಎಂದೂ ಆರೆಸ್ಸೆಸ್ ಮೂಲಗಳು ತಿಳಿಸಿವೆ.
ಮದನ್ ದಾಸ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವರು ಕಂಬನಿ ಮಿಡಿದಿದ್ದಾರೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.