


ಉಡುಪಿ, : ಉಡುಪಿ ನಗರಸಭೆಯ ನಗರೋತ್ಥಾನ ೪ ನೇ ಹಂತದ ಅನುದಾನದಡಿ ಶೇ 24.10 ., ಶೇ. 7.25 ಮತ್ತು ಶೇ. 5 ಕ್ಕೆ ಮಂಜೂರಾದ ಮೊತ್ತದಲ್ಲಿ ವ್ಯಕ್ತಿ ಸಂಬಂಧಿತ ಸೌಲಭ್ಯಗಳಲ್ಲಿ ಹೊಲಿಗೆ ಯಂತ್ರ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಜಾತಿ ಮತ್ತು ಆದಾಯ ದೃಢಪತ್ರ, ಪ್ರಸಕ್ತ ಸಾಲಿನ ಆಸ್ತಿ ತೆರಿಗೆ ಪಾವತಿ ರಶೀದಿ, ಪಡಿತರ ಚೀಟಿ ಪ್ರತಿ, ಆಧಾರ್‌ಕಾರ್ಡ್, ಅರ್ಜಿದಾರರ ಭಾವಚಿತ್ರ, ಹೊಲಿಗೆ ತರಬೇತಿ ಪಡೆದ ಬಗ್ಗೆ ದೃಢಪತ್ರದ ಪ್ರತಿಯೊಂದಿಗೆ ಮಾರ್ಚ್ ೧೦ ರ ಒಳಗಾಗಿ ಪೌರಾಯುಕ್ತರು, ನಗರಸಭೆ ಉಡುಪಿ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.