



ಮಂಡ್ಯ: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯದ ಪೆನ್ ಡ್ರೈವ್ ಪ್ರಕರಣದಲ್ಲಿ ಎಸ್ ಐಟಿ ಪೊಲೀಸರು ಮೂರನೇ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
ಮಾಜಿ ಸಚಿವ ಎಚ್.ಡಿ.ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯಿತಿ ಸದಸ್ಯೆ ಸಲ್ಲಿಸಿದ್ದ ದೂರು ಆಧರಿಸಿ ವಿಚಾರಣೆ ನಡೆಸಿದ ಎಸ್ ಐಟಿ ಪೊಲೀಸರು ಶುಕ್ರವಾರ ನ್ಯಾಯಾಲಯಕ್ಕೆ 1691 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
ಸಂತ್ರಸ್ತೆ ಜಿಲ್ಲಾ ಪಂಚಾಯಿತಿ ಸದಸ್ಯೆಯ ಸೀರೆಯನ್ನು ಪ್ರಮುಖ ಸಾಕ್ಷ್ಯ ಮಾಡಿಕೊಂಡು, 120 ಸಾಕ್ಷಿಗಳ ವಿವರವನ್ನೊಳಗೊಂಡ 1,691 ಪುಟಗಳ ಸುದೀರ್ಘ ದೋಷಾರೋಪ ಪಟ್ಟಿಯನ್ನು ಸಲ್ಲಿಸಲಾಗಿದೆ.
ಗನ್ ಪಾಯಿಂಟ್‌ನಲ್ಲಿ ಬೆದರಿಸಿ ಮಹಿಳೆ ಮೇಲೆ ಅತ್ಯಾಚಾರ ಎಸಗಲಾಗಿದೆ. ವೀಡಿಯೋ ಮಾಡಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ಪದೇ ಪದೇ ಅತ್ಯಾಚಾರ ವೆಸಗಿ ದೌರ್ಜನ್ಯ ನಡೆಸಲಾಗಿದೆ. ಸಂಸದ ಅನ್ನೋ ಭಯದಿಂದ ದೂರು ಕೊಡದೆ ಸುಮ್ಮನಿರೋದಾಗಿ ಸಂತ್ರಸ್ತೆ ಹೇಳಿಕೆ ನೀಡಿದ್ದಾರೆ. ಎರಡು ದಿನಗಳ ಹಿಂದೆಯಷ್ಟೇ ಎಸ್ ಐಟಿ ಪೊಲೀಸರು 2ನೇ ಪ್ರಕರಣದಲ್ಲಿ ಚಾರ್ಜ್ ಶೀಟ್ ಸಲ್ಲಿಸಿದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.